koteshwara Fire : ಕೋಟೇಶ್ವರದಲ್ಲಿ ಅವಘಡ : ಎಸ್‌ಎಲ್‌ಆರ್‌ಎಂ ಘಟಕಕ್ಕೆ ಬೆಂಕಿ, ಲಕ್ಷಾಂತರ ರೂ. ನಷ್ಟ

koteshwara Fire : ಕುಂದಾಪುರ: ಕೋಟೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಸ್‌ಎಲ್‌ಆರ್‌ಎಂ ಒಣ ತ್ಯಾಜ್ಯ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿ ಲಕ್ಷಾಂತರ ಮೌಲ್ಯದ ಸೊತ್ತುಗಳು ಹಾನಿಗೆ ಒಳಗಾಗಿರುವ ಘಟನೆ ನಡೆದಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು ಬೆಂಕಿ ನಂದಿಸುವ ಕಾರ್ಯ ಮಾಡುತ್ತಿದ್ದಾರೆ.

ಕೋಟೇಶ್ವರ ಗ್ರಾಮ ಪಂಚಾಯತ್ ಕಟ್ಟಡದ ಕೆಳಭಾಗದಲ್ಲಿ ವಾಣಿಜ್ಯ ಸಂಕೀರ್ಣವಿದ್ದು, ಮೇಲ್ಬಾಗದಲ್ಲಿ ಒಣತಾಜ್ಯ ಸಂಗ್ರಹ ಘಟಕ ಕಾರ್ಯನಿರ್ವಹಿಸುತ್ತಿತ್ತು.

ಒಣತ್ಯಾಜ್ಯ ಸಂಗ್ರಹಣಾ ಘಟಕದಲ್ಲಿ ಸಂಗ್ರಹಣೆ ಮಾಡಲಾಗಿದ್ದ ಕಸಕ್ಕೆ ಏಕಾಏಕಿ ಬೆಂಕಿ ತಗುಲಿದ್ದು, ತ್ಯಾಜ್ಯದ ಜೊತೆಗೆ ಲಕ್ಷಾಂತರ ಮೌಲ್ಯದ ಯಂತ್ರೋಪಕರಣಗಳು ಬೆಂಕಿಗೆ ಆಹುತಿಯಾಗಿದೆ.

ಅಗ್ನಿ ಅವಘಡದಿಂದಾಗಿ ವಾಣಿಜ್ಯ ಕಟ್ಟಡಕ್ಕೂ ಹಾನಿಯಾಗುವ ಸಾಧ್ಯತೆ ಇತ್ತು. ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ಕೋಟೇಶ್ವರ ಪಂಚಾಯತ್ ಕಟ್ಟಡಕ್ಕೆ ವ್ಯಾಪಿಸಿದ್ದ ಬೆಂಕಿ ಇತರ ಕಟ್ಟಡಗಳಿಗೆ ವ್ಯಾಪಿಸುವುದನ್ನು ಅಗ್ನಿಶಾಮಕ ಸಿಬ್ಬಂದಿ ತಡೆದಿದ್ದಾರೆ.

ಕುಂದಾಪುರ ಹಾಗೂ ಬೈಂದೂರು ಅಗ್ನಿಶಾಮಕ ದಳದ ಸಿಬ್ಬಂದಿಗಳು ಜಂಟಿ ಕಾರ್ಯಾಚರಣೆಯನ್ನು ನಡೆಸಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
Accident in koteshwara Fire at SLRM unit loss of lakhs of rupees



