ರಾಹುಲ್ ಗಾಂಧಿಗೆ ನಿಂದನೆ ಆರೋಪ: ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಕೇಸ್ ದಾಖಲು

ಬಿಜೆಪಿ ಪ್ರತಿಭಟನಾ ಸಭೆಯಲ್ಲಿ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಅವಹೇಳನಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ್ದಾರೆ ಎಂಬ ಗಂಭೀರ ಆರೋಪದಡಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ  ಅವರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ: ಬಿಜೆಪಿ ಪ್ರತಿಭಟನಾ ಸಭೆಯಲ್ಲಿ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಅವಹೇಳನಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ್ದಾರೆ ಎಂಬ ಗಂಭೀರ ಆರೋಪದಡಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ  ಅವರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಿಲ್ಲಾಧ್ಯಕ್ಷ ಅಶೋಕ್ ಕೊಡವುರು, ಪ್ರಸಾದ್ ರಾಜ್ ಕಾಂಚನ್, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ನೀಡಿದ ಅಧಿಕೃತ ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ದೂರಿನ ಪ್ರಮುಖ ಅಂಶಗಳು:

ಜುಲೈ 28ರಂದು ಉಡುಪಿಯ ಜೋಡುಕಟ್ಟೆ ಬಳಿ ನಡೆದ ಬಿಜೆಪಿ ಪ್ರತಿಭಟನಾ ಸಭೆಯಲ್ಲಿ ಶಾಸಕ ಯಶ್‌ಪಾಲ್ ಸುವರ್ಣ ಅವರು ರಾಹುಲ್ ಗಾಂಧಿ ಅವರನ್ನು ಉದ್ದೇಶಿಸಿ ಆಕ್ಷೇಪಾರ್ಹ ಪದಗಳನ್ನು ಬಳಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಭಾಷಣದ ವೇಳೆ ಬಾಬ್ರಿ ಮಸೀದಿ ಧ್ವಂಸದ ಪ್ರಸ್ತಾಪ ಮಾಡಿ, ಸಮಾಜದಲ್ಲಿ ದ್ವೇಷವನ್ನು ಪ್ರಚೋದಿಸುವ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿದೆ.

ನೀಟ್ (NEET) ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳ ವಿರುದ್ಧವೂ ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆ ಹಾಗೂ ವಿವಿಧ ಸಮುದಾಯಗಳ ನಡುವೆ ಉದ್ವಿಗ್ನತೆ ಸೃಷ್ಟಿಸುವ ಯತ್ನ ನಡೆದಿದೆ ಎಂದು ದೂರುದಾರರು ದೂರಿದ್ದಾರೆ.

ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಹಾಗೂ ತನಿಖೆಯನ್ನು ಕೈಗೊಂಡಿದ್ದಾರೆ.

Meghana Pranuth | ಮೇಘನಾ ಪ್ರಣೂತ್‌

ಮೇಘನಾ ಪ್ರಣೂತ್‌ ಮೂಲತಃ ಉಡುಪಿ ಜಿಲ್ಲೆಯವರು. ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣವನ್ನು ಪಡೆದಿದ್ದು, ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಸಿನಿಮಾ, ಕ್ರೀಡೆ, ವಾಣಿಜ್ಯ, ಫ್ಯಾಷನ್‌ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದಾರೆ. ಇದೀಗ ನ್ಯೂಸ್‌ ನೆಕ್ಸ್ಟ್‌ನಲ್ಲಿ ನಿರೂಪಕರಾಗಿ, ಕಂಟೆಂಟ್‌ ಕ್ರಿಯೆಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ.