ಬೈಕ್ ನಿಯಂತ್ರಣ ತಪ್ಪಿ ಪಲ್ಟಿ: ಸವಾರ ಸ್ಥಳದಲ್ಲೇ ಸಾವು
ಉಡುಪಿ: ಸವಾರನ ನಿಯಂತ್ರಣ ತಪ್ಪಿ ಬೈಕ್ ಪಲ್ಟಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿದ ದುರ್ಘಟನೆ ಬೈಂದೂರು ತಾಲೂಕಿನ ನಾಡಗುಡ್ಡೆಯಂಗಡಿಯ ಬೆಳ್ಳಾಡಿ ಪ್ರದೇಶದಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ.
ಮೃತರನ್ನು ಕೋಟ ಮಣೂರು ಪಡುಕರೆ ನಿವಾಸಿ ಪ್ರಭಾಕರ್ ಮೆಂಡನ್ ಎಂದು ಗುರುತಿಸಲಾಗಿದೆ. ಭಾನುವಾರ ರಾತ್ರಿ ಮಣೂರು ಪಡುಕರೆ ಮನೆಯಿಂದ ತಮ್ಮ ಪತ್ನಿಯ ಮನೆಗೆ ತೆರಳುತ್ತಿದ್ದ ಸಂದರ್ಭ ನಾಡಗುಡ್ಡೆಯಂಗಡಿಯ ಬೆಳ್ಳಾಡಿ ಬಳಿ ಅವರ ಬೈಕ್ ಸ್ಕಿಡ್ ಆಗಿ ರಸ್ತೆಯಲ್ಲಿ ಪಲ್ಟಿಯಾಗಿದ್ದು, ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಸಂಬಂಧ ಮೃತರ ಸಹೋದರರು ನೀಡಿದ ದೂರಿನ ಆಧಾರದ ಮೇಲೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ: ಶ್ರೀ ಕೃಷ್ಣ ಮಠದಲ್ಲಿ ಆತಂಕ ಸೃಷ್ಟಿಸಿದ ಅಪರಿಚಿತ ಯುವಕ ವಶಕ್ಕೆ
ಮೃತ ಪ್ರಭಾಕರ್ ಮೆಂಡನ್ ಅವರು ಖ್ಯಾತ ಯಕ್ಷಗಾನ ಕಲಾವಿದ ದಿವಂಗತ ಮೊಳಹಳ್ಳಿ ಹೆರಿಯ ನಾಯಕ್ ಅವರ ಹಿರಿಯ ಪುತ್ರರಾಗಿದ್ದು, ಅವರ ಅಕಾಲಿಕ ನಿಧನದಿಂದ ಕುಟುಂಬದಲ್ಲಿ ಆಳವಾದ ಶೋಕದ ವಾತಾವರಣ ನಿರ್ಮಾಣವಾಗಿದೆ. ಮೃತರು ಪತ್ನಿ, ಒಬ್ಬ ಗಂಡು ಹಾಗೂ ಒಬ್ಬ ಹೆಣ್ಣು ಮಗುವನ್ನು ಅಗಲಿದ್ದಾರೆ.



