ಬ್ರಹ್ಮಾವರದಲ್ಲಿ ದ್ವೇಷ ಭಾಷಣ ಪ್ರಕರಣ: ಇಬ್ಬರ ಬಂಧನ…

ಉಡುಪಿ: ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದ್ವೇಷ ಭಾಷಣಕ್ಕೆ ಸಂಬಂಧಿಸಿ ದಾಖಲಾದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಂತೋಷ ಕುಮಾರ್ ಶೆಟ್ಟಿ (56), ಕೆ. ನಾಗರಾಜ (62) ಬಂಧಿತರು.
ಡಿವೈಎಸ್ಪಿ ಪ್ರಭು ಡಿ.ಟಿ. ಹಾಗೂ ಬ್ರಹ್ಮಾವರ ವೃತ್ತ ನಿರೀಕ್ಷಕ ಗೋಪಿಕೃಷ್ಣ ಅವರ ಮಾರ್ಗದರ್ಶನದಲ್ಲಿ, ಪೊಲೀಸ್ ಉಪ ನಿರೀಕ್ಷಕರಾದ ಅಶೋಕ ಮಾಳಾಬಗಿ, ಸುದರ್ಶನ್ ದೊಡಮನಿ ಮತ್ತು ಠಾಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ. ಈ ಪ್ರಕರಣದ ಕುರಿತು ಬ್ರಹ್ಮಾವರ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

Ashwath Acharya | ಅಶ್ವಥ್ ಆಚಾರ್ಯ

ನ್ಯೂಸ್‌ ನೆಕ್ಸ್ಟ್‌ನ ಹಿರಿಯ ವರದಿಗಾರರಾಗಿರುವ ಅಶ್ವಥ್‌ ಆಚಾರ್ಯ ಅವರು ಪತ್ರಕರ್ತರಾಗಿ ಸುಮಾರು 20 ವರ್ಷಗಳ ಅನುಭವ ಹೊಂದಿದ್ದಾರೆ. ಕರ್ನಾಟಕದ ಪ್ರಖ್ಯಾತ ಸುದ್ದಿವಾಹಿನಿ, ಕನ್ನಡ ಪ್ರತಿಷ್ಠಿತ ದಿನ ಪತ್ರಿಕೆಗಳಲ್ಲಿ ಹಾಗೂ ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. More »

Related Stories