ಬ್ರಹ್ಮಾವರ : ಅಪರಿಚಿತ ವಾಹನ ಢಿಕ್ಕಿ – ಚಿಕಿತ್ಸೆ ಫಲಕಾರಿಯಾಗದೆ ನೇಪಾಳಿ ವ್ಯಕ್ತಿ ಸಾವು

ಮದನ್ ಕುಮಾರ್ ಅವರು ಬೆಂಗಳೂರಿನಿಂದ ಏಪ್ರಿಲ್ 29ರಂದು ಸ್ನೇಹಿತನನ್ನು ಭೇಟಿ ಮಾಡಲು ಬ್ರಹ್ಮಾವರಕ್ಕೆ ಬಂದಿದ್ದರು. ಬಳಿಕ ಅಲ್ಲಿಂದ ಚೇರ್ಕಾಡಿ ಕಡೆಗೆ ತೆರಳಲು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾಗಿರುವುದಾಗಿ ತಿಳಿದುಬಂದಿದೆ.

ಉಡುಪಿ: ಬ್ರಹ್ಮಾವರ ಕೃಷಿ ಕೇಂದ್ರದ ರಸ್ತೆಯಲ್ಲಿ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನೇಪಾಳ ಮೂಲದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ನೇಪಾಳದ ಮದನ್ ಕುಮಾರ್ ಎಂದು ಗುರುತಿಸಲಾಗಿದೆ.

ಮದನ್ ಕುಮಾರ್ ಅವರು ಬೆಂಗಳೂರಿನಿಂದ ಏಪ್ರಿಲ್ 29ರಂದು ಸ್ನೇಹಿತನನ್ನು ಭೇಟಿ ಮಾಡಲು ಬ್ರಹ್ಮಾವರಕ್ಕೆ ಬಂದಿದ್ದರು. ಬಳಿಕ ಅಲ್ಲಿಂದ ಚೇರ್ಕಾಡಿ ಕಡೆಗೆ ತೆರಳಲು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾಗಿರುವುದಾಗಿ ತಿಳಿದುಬಂದಿದೆ.

Also Read : ನೀಟ್ ಪರೀಕ್ಷೆ ಭೀತಿಯಲ್ಲಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ಸಕಲೇಶಪುರದಲ್ಲಿ ಪತ್ತೆ

ಅಪಘಾತದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಮೊದಲು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೇ 3ರಂದು ಬೆಳಗ್ಗೆ ಅವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡಿಕ್ಕಿ ಹೊಡೆದು ಪರಾರಿಯಾದ ವಾಹನದ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Also Read : ತಿಂಗಳಿಗೆ 10,000 ಹೂಡಿಕೆ ಮಾಡಿದ್ರೆ 10 ವರ್ಷಗಳಲ್ಲಿ 34 ಲಕ್ಷ ಲಾಭ! ಈ ಸ್ಕೀಮ್ ಗೊತ್ತಾ

brahmavara accident nepali man dies Kannada News

Ashwath Acharya | ಅಶ್ವಥ್ ಆಚಾರ್ಯ

ನ್ಯೂಸ್‌ ನೆಕ್ಸ್ಟ್‌ನ ಹಿರಿಯ ವರದಿಗಾರರಾಗಿರುವ ಅಶ್ವಥ್‌ ಆಚಾರ್ಯ ಅವರು ಪತ್ರಕರ್ತರಾಗಿ ಸುಮಾರು 20 ವರ್ಷಗಳ ಅನುಭವ ಹೊಂದಿದ್ದಾರೆ. ಕರ್ನಾಟಕದ ಪ್ರಖ್ಯಾತ ಸುದ್ದಿವಾಹಿನಿ, ಕನ್ನಡ ಪ್ರತಿಷ್ಠಿತ ದಿನ ಪತ್ರಿಕೆಗಳಲ್ಲಿ ಹಾಗೂ ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. More »

Related Stories