ಕುಂದಾಪುರ: Crane accident Kundapur: ಖಾಸಗಿ ಬಸ್​ ಚಾಲಕನ ನಿರ್ಲಕ್ಷ್ಯ​ , ಕ್ರೇನ್ ಹರಿದು ಯುವಕ ಮೃತ್ಯು

ಉಡುಪಿ: Crane accident: ಕ್ರೇನ್ ಹರಿದು ಯುವಕನೋರ್ವ ಮೃತಪಟ್ಟ ದಾರುಣ ಘಟನೆ ಕುಂದಾಪುರ ತಾಲೂಕಿನ ತೆಕ್ಕಟ್ಟೆ(Thekkatte) ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿದೆ.ಮೃತ ಯುವಕನನ್ನು ತೆಕ್ಕಟ್ಟೆ ಗ್ರಾಮದ ಅಭಿಷೇಕ್ ಪೂಜಾರಿ ಎಂದು ಗುರುತಿಸಲಾಗಿದೆ.

ಯೂಟರ್ನ್ ತೆಗೆದುಕೊಳ್ಳುವ ಸ್ಥಳದಲ್ಲಿ ನಿಂತಿದ್ದ ಖಾಸಗಿ ಬಸ್​ನಿಂದ ಪ್ರಯಾಣಿಕರು ಹತ್ತಿ ಇಳಿಯುತ್ತಿದ್ದರು. ಈ ಬಸ್​ನ ಪಕ್ಕದಲ್ಲೇ ಹಾದು ಹೋದ ಮೃತ ಬೈಕ್​ ಸವಾರ ಯುಟರ್ನ್​ ತೆಗೆದುಕೊಳ್ಳಲು ಮುಂದಾಗಿದ್ದ. ಆದರೆ ಏಕಾಏಕಿ ಬಸ್​ ಚಲಿಸಿದ ಪರಿಣಾಮ ಬೈಕ್​ ಸವಾರ ನಿಯಂತ್ರಣ ತಪ್ಪಿ ಬೈಕ್​ನಿಂದ ಬಿದ್ದಿದ್ದಾನೆ.

Also Read: ಬೈಂದೂರು : ಶಾಲಾ ವಾಹನಕ್ಕೆ ನಕಲಿ ವಿಮಾ ಪಾಲಿಸಿ, ಪ್ರಕರಣ ದಾಖಲು

ಸವಾರ ಬೀಳುತ್ತಿದ್ದಂತೆ ಆತನ ಮೇಲೆ ಕ್ರೇನ್ ಹರಿದಿದೆ. ಗಾಯಾಳು ಯುವಕನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತಪಟ್ಟಿದ್ದಾನೆ.
ಖಾಸಗಿ ಬಸ್​ ಚಾಲಕನ ನಿರ್ಲಕ್ಷ್ಯದಿಂದಾಗಿ ಈ ಅವಘಡ ಸಂಭವಿಸಿದ್ದು ಉಡುಪಿ – ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಖಾಸಗಿ ಬಸ್​ಗಳಿಂದ ಅನೇಕರು ಜೀವ ಕಳೆದುಕೊಳ್ಳುವಂತಾಗಿದೆ ಎಂದು ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗ್ತಿದೆ.

ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಅಪಘಾತದ ದೃಶ್ಯಾವಳಿಗಳು ವೈರಲ್​ ಆಗಿದೆ. ಈ ಸಂಬಂಧ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Also Read: ಉಡುಪಿ : ಆರ್‌ಟಿಓ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

Darshan Shetty Narkali | ದರ್ಶನ್‌ ಶೆಟ್ಟಿ ನಾರ್ಕಳಿ

ದರ್ಶನ್‌ ಶೆಟ್ಟಿ ನಾರ್ಕಳಿ (Darshan Shetty Narkali) ಅವರು ನ್ಯೂಸ್‌ ನೆಕ್ಸ್ಟ್ ಕನ್ನಡ ( News Next Kannada) ವಿಭಾಗದ ಪತ್ರಕರ್ತ. ಮಂಗಳೂರು ವಿವಿಯಲ್ಲಿ ಪದವಿ ಪಡೆದಿದ್ದಾರೆ. ಕಳೆದ 1 ವರ್ಷಗಳಿಂದ ವೆಬ್‌ಸೈಟ್‌ನಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ನ್ಯೂಸ್‌ ನೆಕ್ಸ್ಟ್‌ ( News Next Digital) ಸುದ್ದಿ ವಾಹಿನಿಯಲ್ಲಿ ನಿರೂಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೋಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು. More »

Related Stories