ಉಡುಪಿ : ಜಿಲ್ಲೆಯ ರೌಡಿ ಶೀಟರ್ ಸೇರಿದಂತೆ ಇಬ್ಬರು ಆರೋಪಿಗಳ ವಿರುದ್ಧ ಉಡುಪಿ ಜಿಲ್ಲಾ ವಿಶೇಷ ಕಾರ್ಯಾಂಗ ದಂಡಾಧಿಕಾರಿ ಹಾಗೂ ಪೊಲೀಸ್ ಅಧೀಕ್ಷಕರು ಮಾ. 26ರಂದು ಗಡಿಪಾರು ಆದೇಶ ಹೊರಡಿಸಿದ್ದಾರೆ.
ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕಳತ್ತೂರು ಗ್ರಾಮದ ಸೂರ್ಯಗುಡ್ಡೆಯ ನೌಫಿಲ್ ಹಾಗೂ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಮಲ್ಪೆ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ಸುಹಾನ್ ಪೂಜಾರಿ ಗಡಿಪಾರುಗೊಳಿಸಲಾದ ಆರೋಪಿಗಳಾಗಿದ್ದಾರೆ.
ನೌಫಿಲ್ ವಿರುದ್ಧ ಒಟ್ಟು ಐದು ಪ್ರಕರಣಗಳು ದಾಖಲಾಗಿದ್ದು, ಶಿರ್ವ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟರ್ ತೆರೆಯಲಾಗಿದೆ. ಅದೇ ರೀತಿಯಾಗಿ ಸುಹಾನ್ ಪೂಜಾರಿ ವಿರುದ್ಧ ನಾಲ್ಕು ಪ್ರಕರಣಗಳು ದಾಖಲಾಗಿವೆ.
Also Read: ಕಾರ್ಕಳ : ಅಜೆಕಾರಲ್ಲಿ ಕೋಳಿ ಹಣದ ಬಾಕಿ ವಿಚಾರಕ್ಕೆ ಮಾರಾಮಾರಿ : 15 ಮಂದಿ ವಿರುದ್ದ ಪ್ರಕರಣ
ಗಡಿಪಾರು ಆದೇಶದಂತೆ ನೌಫಿಲ್‌ನನ್ನು ಹಾವೇರಿ ಜಿಲ್ಲೆಯ ಶಿಗ್ಗಾಂವ ಪೊಲೀಸ್ ಠಾಣಾ ವ್ಯಾಪ್ತಿಗೆ ಹಾಗೂ ಸುಹಾನ್ ಪೂಜಾರಿಯನ್ನು ಯಾದಗಿರಿ ಜಿಲ್ಲೆಯ ಯಾದಗಿರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಕಳುಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ.
Deportation order for two including Rowdy Sheeter
