ಅಜೆಕಾರು: ಧರ್ಮಸ್ಥಳ ವೀರೇಂದ್ರ ಹೆಗ್ಗಡೆ ವಿರುದ್ದ ಅವಹೇಳನಕಾರಿ ಪೋಸ್ಟ್‌, ಪ್ರಕರಣ ದಾಖಲು

ಅಜೆಕಾರು: (Dharmasthala veerendra heggade) ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್‌ ಮಾಡಿದ ಮಹಿಳೆಯ ವಿರುದ್ದ ಪ್ರಕರಣ ದಾಖಲಾಗಿದೆ.

ಕೋಮು ಪ್ರಚೋದನೆ, ಧಾರ್ಮಿಕ ಭಾವನೆಗೆ ಧಕ್ಕೆ ತರುವ ವಿಚಾರವನ್ನು ಪೋಸ್ಟ್‌ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಿಜಯ ವಿಜಿ ಎಂಬವರ ವಿರುದ್ದ ಅಜೆಕಾರು ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಬೈಂದೂರಿನಲ್ಲಿ ವಿಚಿತ್ರ ಕಳವು ಪ್ರಕರಣ : ಕಳವಾದ ಬೈಕ್‌ ಪತ್ತೆ, 2ನೇ ಬಾರಿ ಮತ್ತೆ ಬೈಕ್‌ ಕಳವು

ವಿಜಯ ವಿಜಿ ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ, ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ವಿರುದ್ದ ಅವಹೇಳನಕಾರಿ ಪೋಸ್ಟ್‌ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಜೈನ ಧರ್ಮದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ಹಾಗೂ ಇತರ ಧರ್ಮಗಳ ನಡುವೆ ಕೋಮು ಭಾವವೆ ಕೆರಳಿಸುವ ಉದ್ದೇಶದಿಂದಲೇ ಈ ಪೋಸ್ಟ್‌ ಮಾಡಲಾಗಿದೆ. ಅಲ್ಲದೇ ಸಾರ್ವಜನಿಕವಾಗಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಕಾರ್ಕಳ : ಹಾಡುಹಗಲೇ ಬೀಗ ಒಡೆದು ಮನೆ ದರೋಡೆ, 6.5 ಲಕ್ಷ ರೂ. ಮೌಲ್ಯದ ಚಿನ್ನ, ಸೊತ್ತು ಕಳವು

ಅಜೆಕಾರು ಠಾಣೆಯ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories