ನಿಟ್ಟೆ ವಿಶ್ವವಿದ್ಯಾಲಯದ ದಿಶಾ ಡಿ.ಎನ್. ಅವರಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಪದವಿ ಪ್ರದಾನ
ಉಡುಪಿ : ನಿಟ್ಟೆಯ ಎನ್‌ಎಂಎಎಂ ಅಡ್ಯಂತಾಯ ಪರಿಗಣಿತ ವಿಶ್ವವಿದ್ಯಾನಿಲಯದ ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕಿ ದಿಶಾ ಡಿ.ಎನ್. ಅವರಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಪಿಎಚ್‌ಡಿ ಪದವಿಯನ್ನು ಪ್ರದಾನ ಮಾಡಿದೆ.
ಯಂತ್ರ ಅಧ್ಯಯನ ತಂತ್ರಜ್ಞಾನ ಬಳಸಿ ವಂಶಪಾರಂಪರ್ಯ ರೋಗಗಳ ಪೂರ್ವಾನುಮಾನ ಕುರಿತು ಅವರು ಸಂಶೋಧನೆ ನಡೆಸಿದ್ದಾರೆ. ಈ ಸಂಶೋಧನೆ ಬೆಂಗಳೂರು ಎಂ.ಎಸ್. ರಾಮಯ್ಯ ತಾಂತ್ರಿಕ ಮಹಾವಿದ್ಯಾಲಯದ ಡಾ. ಸೀಮಾ ಎಸ್. ಅವರ ಮಾರ್ಗದರ್ಶನದಲ್ಲಿ ಪೂರ್ಣಗೊಂಡಿದೆ.
ಶಿ-ಮಾರ್ಟ್ ಯೋಜನೆ: ಮಹಿಳೆಯರಿಗೆ ಲಕ್ಷ ಲಕ್ಷ ಅದಾಯ ತರುವ ಹೊಸ ಯೋಜನೆಯ ಸಂಪೂರ್ಣ ವಿವರ
ಫೆಬ್ರವರಿ 2ರಂದು ಬೆಳಗಾವಿಯಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 25ನೇ ಘಟಿಕೋತ್ಸವದಲ್ಲಿ ದಿಶಾ ಅವರಿಗೆ ಪಿಎಚ್‌ಡಿ ಪದವಿ ನೀಡಲಾಯಿತು.



