ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಅವರ ಮಗ ಆತ್ಮಹತ್ಯೆ

ಬ್ರಹ್ಮಾವರ : ಕಾರ್ಕಳದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ (Sudeep Bhandary) (48 ವರ್ಷ) ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ಬಾರಕೂರಿನಲ್ಲಿ ನಡೆದಿದೆ.
ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ವೈನ್ಶಾಪ್ ವ್ಯವಹಾರವನ್ನು ಮಾಡಿಕೊಂಡಿದ್ದ ಸುದೀಪ್ ಭಂಡಾರಿ ಅವರ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಸುದೀಪ್ ಭಂಡಾರಿ (Sudeep Bhandary) ಸೌಮ್ಯ ಸ್ವಭಾವದವರಾಗಿದ್ದರು. ತಾಯಿ, ಪತ್ನಿ, ಇಬ್ಬರು ಮಕ್ಕಳು, ಸಹೋದರಿ ಹಾಗೂ ಸಹೋದರನನ್ನು ಅಗಲಿದ್ದಾರೆ.
ಬಾರಕೂರಿನ ಬಳಿಯಲ್ಲಿ ರೈಲು ಹಳಿಯಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ಇದೀಗ ಘಟನಾ ಸ್ಥಳಕ್ಕೆ ಬ್ರಹ್ಮಾವರ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆಯನ್ನು ನಡೆಸುತ್ತಿದ್ದಾರೆ.
Former Karkala MLA Gopal Bhandary son Sudeep Bhandary commits suicide in Barkoor



