ಉಡುಪಿಯಲ್ಲಿ ರೆಡ್‌ ಅಲರ್ಟ್‌ : ಅಗಸ್ಟ್ 18 ರಂದು ಶಾಲೆಗಳಿಗೆ ರಜೆ ಸಾಧ್ಯತೆ

Udupi School Holiday : ಉಡುಪಿ : ಉಡುಪಿ ಜಿಲ್ಲೆಯಾದ್ಯಂತ ಅಗಸ್ಟ್‌ 18 ಮತ್ತು 19 ರಂದು ಬಾರೀ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆಗಳಿಗೆ ರಜೆ ನೀಡುವ ಸಾಧ್ಯತೆಯಿದೆ.

ಸೈಕ್ಲೋನ್‌ ಹಿನ್ನೆಲೆಯಲ್ಲಿ ಕರ್ನಾಟಕ ಕರಾವಳಿ ಭಾಗಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಧಾರಾಕಾರ ಮಳೆ ಸುರಿಯಲಿದೆ. ಐಎಂಡಿ ಮುನ್ಸೂಚನೆಯಂತೆ ಉಡುಪಿ ಜಿಲ್ಲಾಡಳಿತ ಈಗಾಗಲೇ ಅಗಸ್ಟ್‌ 18 ಮತ್ತು 19ರಂದು ಜಿಲ್ಲೆಯಾದ್ಯಂತ ರೆಡ್‌ ಅಲರ್ಟ್‌ ಘೋಷಿಸಿದೆ.

ಇನ್ನೂ ಒಂದು ವಾರ ಭಾರೀ ಮಳೆ

ಕರ್ನಾಟಕದ ಕರಾವಳಿ ಭಾಗಗಳಲ್ಲಿ ಇನ್ನೂ ಒಂದು ವಾರಗಳ ಕಾಲ ಮಳೆ ಮುಂದುವರಿಕೆ ಆಗುವ ಸಾಧ್ಯತೆಯಿದೆ. ಉಡುಪಿ ಮಾತ್ರವಲ್ಲದೇ ಮುಂದಿನ ಎರಡು ದಿನಗಳ ಕಾಲ ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಗಸ್ಟ್‌ 17ರಂದು ಧಾರಾಕಾರ ಮಳೆ ಸುರಿಯುತ್ತಿದ್ದು, ಭಾರೀ ಅವಾಂತರವನ್ನೇ ಸೃಷ್ಟಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಜನರು ಎಚ್ಚರವಾಗಿರುವಂತೆ ಸೂಚಿಸಿದೆ.

ಇದನ್ನೂ ಓದಿ : ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಗಸ್ಟ್‌ 18ರಂದು ರೆಡ್‌ ಅಲರ್ಟ್‌

ಭಾರೀ ಮಳೆ, ಮುನ್ಸೆಚ್ಚರಿಕೆ ವಹಿಸಿ : ಉಡುಪಿ ಡಿಸಿ

ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಕೇಂದ್ರ ಮುನ್ಸೂಚನೆಯಂತೆ ಉಡುಪಿ ಜಿಲ್ಲೆಯಾದ್ಯಂತ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಅರಬ್ಬಿ ಸಮುದ್ರದಲ್ಲಿ ಬಾರೀ ಗಾಳಿ ಮಳೆಯಿಂದಾಗಿ ಸಮುದ್ರದಲ್ಲಿ ಅಬ್ಬರದ ಅಲೆಗಳು ಏರ್ಪಡುವ ಸಾಧ್ಯತೆಯಿದೆ.

ಸಾರ್ವಜನಿಕರು ಅನಗತ್ಯವಾಗಿ ಹೊರಗೆ ಹೋಗುವುದನ್ನು ತಪ್ಪಿಸಬೇಕು. ನದಿ ಮತ್ತು ಕಡಲ ತೀರಕ್ಕೆ ಹೋಗದಂತೆ ಸೂಚಿಸಲಾಗಿದೆ. ಪ್ರವಾಹ ಮತ್ತು ಭೂಕುಸಿತ ಸಂಭವಿಸುವ ಸಾಧ್ಯತೆಗಳ ಬಗ್ಗೆ ಎಚ್ಚರ ವಹಿಸಲು ತಿಳಿಸಲಾಗಿದೆ.

ಇದನ್ನೂ ಓದಿ : ಗಣೇಶ ಮೂರ್ತಿ ಪ್ರತಿಷ್ಠಾಪನೆ ಅನುಮತಿ ಕಡ್ಡಾಯ

ಸಮುದ್ರದಲ್ಲಿ ಪ್ರತಿಕೂಲ ಹವಾಮಾನ, ಪ್ರಬಲ ಗಾಳಿ ಮತ್ತು ಅಲೆಗಳು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಸೂಚಿಸಲಾಗಿದೆ.

ವಿಪತ್ತು ನಿರ್ವಹಣಾ ತಂಡಗಳ ಸಿದ್ಧತೆ: ಯಾವುದೇ ತುರ್ತು ಪರಿಸ್ಥಿತಿ ಎದುರಿಸಲು ಜಿಲ್ಲಾ ವಿಪತ್ತು ನಿರ್ವಹಣಾ ತಂಡಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ.

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories