ಉಡುಪಿ : ಬಾರೀ ಮಳೆ, ಜುಲೈ 25ರಂದು ಶಾಲೆ, ಕಾಲೇಜಿಗೆ ರಜೆ ಘೊಷಣೆ

ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಕರಾವಳಿಯಲ್ಲಿ ಬಾರೀ ಮಳೆಯಾಗುವ ಸಾಧ್ಯತೆಯಿದ್ದು, ಜುಲೈ 25ರಂದು ಉಡುಪಿ ಜಿಲ್ಲೆಯಾದ್ಯಂತ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ಉಡುಪಿ : ಕಳೆದ ಎರಡು ದಿನಗಳಿಂದಲೂ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಜುಲೈ 25ರಂದು ಉಡುಪಿ ಜಿಲ್ಲೆಯಲ್ಲ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಆದೇಶ ಹೊರಡಿಸಿದ್ದಾರೆ.

ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಕರಾವಳಿಯಲ್ಲಿ ಬಾರೀ ಮಳೆಯಾಗುವ ಸಾಧ್ಯತೆಯಿದ್ದು, ಜುಲೈ 25ರಂದು ಉಡುಪಿ ಜಿಲ್ಲೆಯಾದ್ಯಂತ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಅಲ್ಲದೇ ಮುನ್ನೆಚ್ಚರಿಕಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ, ಖಾಸಗಿ ಹಾಗೂ ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಕರ್ನಾಟಕ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದಲೂ ಭಾರೀ ಮಳೆ ಸುರಿಯುತ್ತಿದೆ. ನಾಳೆಯೂ ಕೂಡ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

Karnataka Weather Updates Udupi School Holiday July 25 2026

 

Exit mobile version