ಕಾಪು : ಟೆಂಪೋ ಪಲ್ಟಿ ಇಬ್ಬರು ಸಾವು, ನಾಲ್ವರಿಗೆ ಗಾಯ

Kaup Accident : ಕಾಪು : ಇವೆಂಟ್‌ಗೆ ಸಾಮಗ್ರಿಗಳನ್ನು ಸಾಗಿಸುತ್ತಿದ್ದ ಟೆಂಪೋ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ಕಾಪುವಿನಲ್ಲಿ ನಡೆದಿದೆ.

ಉಡುಪಿ-ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೆಂಪೋ ಪಲ್ಟಿಯಾಗಿದೆ. ಮೃತರನ್ನು ಉತ್ತರ ಪ್ರದೇಶ ಮೂಲದವರು ಎಂದು ತಿಳಿದು ಬಂದಿದೆ.

ಟೆಂಪೋದಲ್ಲಿ ಒಟ್ಟು 6 ಮಂದಿ ಪ್ರಯಾಣಿಸುತ್ತಿದ್ದರು. ಕಾಪುವಿನಿಂದ ಉಡುಪಿಯ ಕಡೆಗೆ ಟೆಂಪೋ ಸಾಗುತ್ತಿತ್ತು. ವೇಗವಾಗಿ ಬಂದ ಟೆಂಪೋ ಹೆದ್ದಾರಿಯಲ್ಲಿ ಪಲ್ಟಿಯಾಗಿದೆ. ಘಟನೆಯಲ್ಲಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ : ದಿತ್ವಾ ಚಂಡಮಾರುತದ ಎಫೆಕ್ಟ್‌ : ಕರಾವಳಿಯಲ್ಲಿ ಥಂಡಾ ಥಂಡಾ ಕೂಲ್‌ ಕೂಲ್‌

ಉಳಿದ ನಾಲ್ವರಿಗೆ ಗಂಭೀರ ಗಾಯವಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳಕ್ಕೆ ಕಾಪು ಠಾಣೆಯ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ಶ್ರೀಕೃಷ್ಣಮಠದಲ್ಲಿ ಮೋದಿ ಭೇಟಿಗಿಲ್ಲ ಅವಕಾಶ : ಪ್ರಮೋದ್‌ ಮಧ್ವರಾಜ್‌ ಹೇಳಿದ್ದೇನು ?

Kaup Accident 2 Death 4 injured Udupi News

Exit mobile version