Kaup Major Accident : ಕಾಪುವಿನಲ್ಲಿ ಭೀಕರ ಅಪಘಾತ : ಟೆಂಪೋ ಪಲ್ಟಿ 5 ಕಾರ್ಮಿಕರ ದುರ್ಮರಣ

Kaup Major Accident : ಕಾಪು : ಟೆಂಪೋ ಪಲ್ಟಿಯಾಗಿ ಐವರು ಸಾವನ್ನಪ್ಪಿರುವ ಭೀಕರ ಘಟನೆ ಉಡುಪಿ ಜಿಲ್ಲೆಯ ಕಾಪುವಿನಲ್ಲಿ ನಡೆದಿದೆ. ಒಟ್ಟು 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತ ಕಾರ್ಮಿಕರೆಲ್ಲರೂ ಉತ್ತರ ಪ್ರದೇಶ ಮೂಲದವರು ಎಂದು ತಿಳಿದು ಬಂದಿದೆ. ಕಾಪುವಿನ ಮಜೂರಿನಿMದ ಇವೆಂಟ್‌ವೊಂದಕ್ಕೆ ಸಾಮಗ್ರಿಗಳನ್ನು ತುಂಬಿಸಿಕೊಂಡು ಉಡುಪಿಯ ಮಲ್ಪೆಯ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆಯಲ್ಲಿ ಕಾಪು ರಾಷ್ಟ್ರೀಯ ಹೆದ್ದಾರಿಯಲ್ಲಿ ಟೆಂಪೋ ಪಲ್ಟಿಯಾಗಿದೆ.
ಇದನ್ನೂ ಓದಿ : ಶ್ರೀ ಕೃಷ್ಣಮಠದಲ್ಲಿ ಮೋದಿ ಭೇಟಿಗಿಲ್ಲ ಅವಕಾಶ : ಪ್ರಮೋದ್ ಮಧ್ವರಾಜ್ ಹೇಳಿದ್ದೇನು ?
ಟೆಂಪೋದಲ್ಲಿ ಒಟ್ಟು 12 ಮಂದಿ ಕಾರ್ಮಿಕರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಇದುವರೆಗೆ ಒಟ್ಟು 5 ಮಂದಿ ಸಾವನ್ನಪ್ಪಿದ್ದು, ಉಳಿದ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಸ್ಥಳದಲ್ಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದರು. ಆದರೆ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿಯೇ ಮತ್ತೆ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕಾಪು ಠಾಣೆಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ರಿತ್ವಾ ಚಂಡಮಾರುತ ಎಫೆಕ್ಟ್ : ಕರಾವಳಿಯಲ್ಲಿ ಥಂಡಾ ಥಂಡಾ ಕೂಲ್ ಕೂಲ್
Kaup Major Accident 5 Death 7 injured Udupi News



