ಕೋಡಿಬೆಂಗ್ರೆ ಬೋಟು ದುರಂತ ಪ್ರಕರಣ : ಲೈಫ್ ಜಾಕೆಟ್ ಧರಿಸದ ಜಿಲ್ಲಾಧಿಕಾರಿಗಳ ವಿಡಿಯೋ ವೈರಲ್

ಉಡುಪಿ : ಕೋಡಿ‌ ಬೆಂಗ್ರೆಯಲ್ಲಿ ಬೋಟ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಲೈಫ್ ಜಾಕೆಟ್ ಧರಿಸುವುದು ಕಡ್ಡಾಯ ಎಂದು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಆದೇಶ ಹೊರಡಿಸಿದ್ದರು. ಆದರೆ ಇದೀಗ ಜಿಲ್ಲಾಧಿಕಾರಿಗಳೇ ಲೈಫ್ ಜಾಕೆಟ್ ಧರಿಸದ ವಿಡಿಯೋ ವೈರಲ್ ಆಗಿದೆ.

ಕೋಡಿ ಬೆಂಗ್ರೆಯಲ್ಲಿ ದುರ್ಘಟನೆ ನಡೆದ ದಿನವೇ ಸೈಂಟ್ ಮೇರಿಸ್ ದ್ವೀಪದಲ್ಲಿ ಜಿಲ್ಲಾಧಿಕಾರಿಗಳು ಧ್ವಜಾರೋಹಣ ಮಾಡಿದ್ದರು. ಧ್ವಜಾರೋಹಣಕ್ಕೆ ಬೋಟ್ ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಅಧಿಕಾರಿಗಳು ತೆರಳಿದ್ದರು. ಆದರೆ ಬೋಟ್ ಪ್ರಯಾಣ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕೂಡ ಲೈಫ್ ಜಾಕೆಟ್ ಧರಿಸಿಲ್ಲ. ಅಲ್ಲದೇ ಚಲಿಸುವ ಬೋಟ್ ನಲ್ಲಿ ನಿಂತು ಕೈಬೀಸುತ್ತಿರುವ ವಿಡಿಯೋ ವೈರಲ್ ಆಗಿದೆ.

ಇದೀಗ ಸಾರ್ವಜನಿಕರಿಗೆ ಆದೇಶ ಹೊರಡಿಸಿದ ಜಿಲ್ಲಾಧಿಕಾರಿಗಳೇ ಸೂಕ್ತ ಮುನ್ನೆಚ್ಚರಿಕೆ ಕೈಗೊಳ್ಳದ ಬಗ್ಗೆಯೂ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದೆ. ಕೋಡಿಬೆಂಗ್ರೆಯಲ್ಲಿ ‌ನಡೆದ ಪ್ರವಾಸಿ ಬೋಟ್ ದುರಂತದಲ್ಲಿ ಮೂವರು ಜೀವ ಕಳೆದುಕೊಂಡಿದ್ದರು. ಘಟನೆ ಬೆನ್ನಲ್ಲೇ ಜಿಲ್ಲಾಧಿಕಾರಿಗಳಿಂದ ಕಠಿಣ ಕ್ರಮದ ಆದೇಶ ಹೊರಡಿಸಿದ್ದರು.

ಇದನ್ನೂ ಓದಿ: ಉಡುಪಿಯಲ್ಲಿ ಪ್ರವಾಸಿ ಬೋಟು ದುರಂತ ಪ್ರಕರಣ: ಚಿಕಿತ್ಸೆ ಫಲಕಾರಿಯಾಗದೆ ಮತ್ತೋರ್ವ ಯುವತಿ ಸಾ*ವು

ಪ್ರವಾಸಿ ಬೊಟುಗಳಲ್ಲಿ ಲೈಫ್ ಜಾಕೆಟ್ ಧರಿಸುವುದು ಕಡ್ಡಾಯಗೊಳಿಸುವ ಜೊತೆಗೆ ಕಡಲಿಗೆ ಇಳಿಯುವ ಮುನ್ನ ಲೈಫ್ ಜಾಕೆಟ್ ಧರಿಸುವಂತೆ ನೋಡಿಕೊಳ್ಳಬೇಕು. ಲೈಫ್ ಜಾಕೆಟ್ ಬಳಕೆ ಬಗ್ಗೆ ಕರಪತ್ರ ಪ್ರಕಟಿಸಬೇಕು. ಅಲ್ಲದೇ ಎಲ್ಲರೂ ಲೈಫ್ ಜಾಕೆಟ್ ಧರಿಸಿದರೆ ಮಾತ್ರ ಬೋಟ್ ಸಾಗಲಿದೆ ಎಂದು ರೆಕಾರ್ಡ್ ಆಡಿಯೋ ಅಳವಡಿಸಬೇಕೆಂದು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದರು.

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories