ಕೋಟ: ಮೊಳಹಳ್ಳಿಯಲ್ಲಿ ಇಸ್ಪೀಟು ಜುಗಾರಿ ಅಡ್ಡೆಗೆ ಪೊಲೀಸರ ದಿಢೀರ್ ದಾಳಿ; ಆರು ಮಂದಿ ಅರೆಸ್ಟ್

ದಾಳಿಯ ವೇಳೆ ಆಟದಲ್ಲಿ ನಿರತರಾಗಿದ್ದ 6 ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ನಗದು ಹಾಗೂ ಜೂಜಾಟಕ್ಕೆ ಬಳಸಿದ್ದ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ಹಣವನ್ನು ಪಣವಾಗಿಟ್ಟುಕೊಂಡು ಅಕ್ರಮವಾಗಿ ಇಸ್ಪೀಟು ಜುಗಾರಿ (ಅಂದರ್-ಬಾಹರ್) ಆಟವಾಡುತ್ತಿದ್ದ ಅಡ್ಡೆಯ ಮೇಲೆ ಕೋಟ ಪೊಲೀಸರು ಭಾನುವಾರ ದಿಢೀರ್ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆಟದಲ್ಲಿ ನಿರತರಾಗಿದ್ದ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ನಗದು ಹಾಗೂ ಜೂಜಾಟಕ್ಕೆ ಬಳಸಿದ್ದ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮೊಳಹಳ್ಳಿ ಗ್ರಾಮದ ಕೋಣಿಹರ ಎಂಬಲ್ಲಿ ಭಾಸ್ಕರ ಶೆಟ್ಟಿ ಎಂಬುವವರ ಮನೆಯ ಎದುರಿನ ಹಾಡಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟು ಜೂಜಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಯೊಂದಿಗೆ ಕಾರ್ಯಪ್ರವೃತ್ತರಾದ ಪಿಎಸ್‌ಐ, ಸ್ಥಳಕ್ಕೆ ತೆರಳಿ ದಾಳಿ ನಡೆಸಿದ್ದಾರೆ.

ಇದನ್ನೂ ಓದಿ : ಹೆಬ್ರಿ: ಹೈಟೆಕ್ ಜೂಜಾಟದ ಅಡ್ಡೆ ಮೇಲೆ ಖಾಕಿ ದಾಳಿ; ಮೂವರ ಬಂಧನ, 13 ಲಕ್ಷ ಮೌಲ್ಯದ ಸ್ವತ್ತು ವಶ

ಇಸ್ಪೀಟು ಜುಗಾರಿ ಆಡುತ್ತಿದ್ದ ಮೊಳಹಳ್ಳಿ ಗ್ರಾಮದ ಚಂದ್ರ ಮೊಗವೀರ (43), ಹುಣ್ಸೆಮಕ್ಕಿಯ ಉಮೇಶ (33), ಕೃಷ್ಣ (27), ಜಪ್ತಿ ಗ್ರಾಮದ ರಘುರಾಮ ಶೆಟ್ಟಿ (49), ಹುಣ್ಸೆಮಕ್ಕಿಯ ರಾಜು (39) ಮತ್ತು ಶಂಕರನಾರಾಯಣ ಬಾಗರಮಕ್ಕಿಯ ಆನಂದ (56) ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತರಿಂದ ಇಸ್ಪೀಟು ಜುಗಾರಿ ಆಟಕ್ಕೆ ಬಳಸಿದ್ದ ಒಟ್ಟು 7,900 ರೂಪಾಯಿ ನಗದು ಹಣ, ಒಂದು ಪ್ಲಾಸ್ಟಿಕ್ ಚೀಲ ಹಾಗೂ ಇಸ್ಪೀಟು ಎಲೆಗಳನ್ನು ಪೊಲೀಸರು ಮಹಜರು ಪ್ರಕ್ರಿಯೆಯ ಮೂಲಕ ವಶಪಡಿಸಿಕೊಂಡಿದ್ದಾರೆ. ಅಕ್ರಮ ಜೂಜಾಟದ ವಿರುದ್ಧ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Meghana Pranuth | ಮೇಘನಾ ಪ್ರಣೂತ್‌

ಮೇಘನಾ ಪ್ರಣೂತ್‌ ಮೂಲತಃ ಉಡುಪಿ ಜಿಲ್ಲೆಯವರು. ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣವನ್ನು ಪಡೆದಿದ್ದು, ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಸಿನಿಮಾ, ಕ್ರೀಡೆ, ವಾಣಿಜ್ಯ, ಫ್ಯಾಷನ್‌ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದಾರೆ. ಇದೀಗ ನ್ಯೂಸ್‌ ನೆಕ್ಸ್ಟ್‌ನಲ್ಲಿ ನಿರೂಪಕರಾಗಿ, ಕಂಟೆಂಟ್‌ ಕ್ರಿಯೆಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ.

Related Stories