ಸಾಲಿಗ್ರಾಮ : ‘ಅನಿಮಲ್ ರೆಸ್ಕ್ಯೂ ಸೆಂಟರ್’ ಹೆಸರಲ್ಲಿ ಮೂಕಪ್ರಾಣಿಗಳಿಗೆ ಹಿಂಸೆ, ಸುಧೀಂದ್ರ ಐತಾಳ್ ವಿರುದ್ಧ ದೂರು

ಸಾಲಿಗ್ರಾಮದಲ್ಲಿರುವ ಶ್ರೀ ಗುರು ನರಸಿಂಹ ದೇವಸ್ಥಾನದ ಹಿಂಭಾಗದಲ್ಲಿ ಇರುವ ಅನಿಮಲ್‌ ರೆಸ್ಕ್ಯೂ ಸೆಂಟರ್‌ನಲ್ಲಿ ಪ್ರಾಣಿಗಳನ್ನು ಅತ್ಯಂತ ಕ್ರೂರವಾಗಿ ನಡೆಸಿಕೊಳ್ಳಲಾಗುತ್ತಿದೆ ಅನ್ನೋ ಆರೋಪದ ಹಿನ್ನೆಲೆಯಲ್ಲಿ ಪೇಟಾ ಇಂಡಿಯಾ ಸಂಸ್ಥೆಯ ಅಧಿಕಾರಿಗಳು ಜುಲೈ 7 ರಂದು ರೆಸ್ಕ್ಯೂ ಸೆಂಟರ್‌ ಮೇಲೆ ದಾಳಿ ನಡೆಸಿದ್ದರು.

ಕೋಟ ( Udupi News)  : ರಕ್ಷಣೆಯ ನೆಪದಲ್ಲಿ ಸಾಕು ಪ್ರಾಣಿಗಳನ್ನು ಅಮಾನವೀಯವಾಗಿ ಇರಿಸಿಕೊಂಡಿರುವ ಆರೋಪದ ಹಿನ್ನೆಲೆಯಲ್ಲಿ ಸಾಲಿಗ್ರಾಮದಲ್ಲಿರುವ ಅನಿಮಲ್ ರೆಸ್ಕ್ಯೂ ಸೆಂಟರ್” (Animal Rescue Centre) ಮೇಲೆ ಪೇಟಾ ಇಂಡಿಯಾ (PETA India) ಅಧಿಕಾರಿಗಳು ದಾಳಿ ನಡೆಸಿದ್ದರು. ಇದೀಗ ರೆಸ್ಕೂ ಸೆಂಟರ್‌ ನಡೆಸುತ್ತಿದ್ದ ಸುಧೀಂದ್ರ ಐತಾಳ್‌ ಅವರ ವಿರುದ್ದ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಲಿಗ್ರಾಮದಲ್ಲಿರುವ ಶ್ರೀ ಗುರು ನರಸಿಂಹ ದೇವಸ್ಥಾನದ ಹಿಂಭಾಗದಲ್ಲಿ ಇರುವ ಅನಿಮಲ್‌ ರೆಸ್ಕ್ಯೂ ಸೆಂಟರ್‌ನಲ್ಲಿ ಪ್ರಾಣಿಗಳನ್ನು ಅತ್ಯಂತ ಕ್ರೂರವಾಗಿ ನಡೆಸಿಕೊಳ್ಳಲಾಗುತ್ತಿದೆ ಅನ್ನೋ ಆರೋಪದ ಹಿನ್ನೆಲೆಯಲ್ಲಿ ಪೇಟಾ ಇಂಡಿಯಾ ಸಂಸ್ಥೆಯ ಅಧಿಕಾರಿಗಳು ಜುಲೈ 7 ರಂದು ರೆಸ್ಕ್ಯೂ ಸೆಂಟರ್‌ ಮೇಲೆ ದಾಳಿ ನಡೆಸಿದ್ದರು.

ಈ ವೇಳೆಯಲ್ಲಿ ಪ್ರಾಣಿಗಳ ರಕ್ಷಣೆ ಮತ್ತು ಆರೈಕೆಯ ಬಗ್ಗೆ ಯಾವುದೇ ಕಾಳಜಿಯನ್ನು ವಹಿಸಿರಲಿಲ್ಲ. ಅಲ್ಲದೇ ಸಾಕು ಪ್ರಾಣಿಗಳಿಂದ ಸಾರ್ವಜನಿಕರ ಜೀವಕ್ಕೆ ಹಾನಿಯಾಗದಂತೆ ಯಾವುದೇ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಿರಲಿಲ್ಲ. ನಾಯಿ ಮತ್ತು ಬೆಕ್ಕುಗಳನ್ನು ಕಟ್ಟಿ ಹಾಕಿ ಹಿಂಸೆ ನೀಡುತ್ತಿದ್ದರು ಎಂದು ಪೇಟಾ ಸಂಸ್ಥೆಯ ಅಧಿಕಾರಿ ಮಹೇಶ್‌ ಎಂಬವರು ಕೋಟ ಪೊಲೀಸ್‌ ಠಾಣೆಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇಷ್ಟೇ ಅಲ್ಲದೇ ರೆಸ್ಕ್ಯೂ ಸೆಂಟರ್‌ನಲ್ಲಿ ದನದ ಕರುವೊಂದರ ಮೃತ ದೇಹ ಪತ್ತೆಯಾಗಿತ್ತು. ಸುಮಾರು ದಿನಗಳ ಹಿಂದೆಯೇ ಕರು ಮೃತಪಟ್ಟಿದ್ದು, ಅದರ ಕಳೆ ಬರಹವನ್ನು ತೆರವುಗೊಳಿಸದೇ ಕೊಳೆಯಲು ಬಿಟ್ಟಿದ್ದರು. ಇದರಿಂದ ದುರ್ನಾತ ಬೀರುತ್ತಿದ್ದು, ಇತರ ಪ್ರಾಣಿಗಳ ಆರೋಗ್ಯಕ್ಕೆ ಅಪಾಯ ತಂದೊಡ್ಡಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಪ್ರಾಣಿಗಳಿಗೆ ಹಾಗೂ ಮನುಷ್ಯರ ಜೀವಕ್ಕೆ ಅಪಾಯ ಒಡ್ಡುವ ರೀತಿಯಲ್ಲಿ ಸಾಕು ಪ್ರಾಣಿಗಳನ್ನು ಇರಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿದ್ದು, ಬಿಎನ್‌ಎಸ್‌ ಕಲಂ 291ರ ಅಡಿ ಹಾಗೂ ಪ್ರಾಣಿ ಹಿಂಸೆ ತಡೆ ಕಾಯ್ದೆಯ ಅಡಿಯಲ್ಲಿಯೂ ಪ್ರಕರಣ ದಾಖಲಾಗಿದೆ.

kota saligrama animal rescue centre peta india raid sudhindra aithal booked

Darshan Shetty Narkali | ದರ್ಶನ್‌ ಶೆಟ್ಟಿ ನಾರ್ಕಳಿ

ದರ್ಶನ್‌ ಶೆಟ್ಟಿ ನಾರ್ಕಳಿ (Darshan Shetty Narkali) ಅವರು ನ್ಯೂಸ್‌ ನೆಕ್ಸ್ಟ್ ಕನ್ನಡ ( News Next Kannada) ವಿಭಾಗದ ಪತ್ರಕರ್ತ. ಮಂಗಳೂರು ವಿವಿಯಲ್ಲಿ ಪದವಿ ಪಡೆದಿದ್ದಾರೆ. ಕಳೆದ 1 ವರ್ಷಗಳಿಂದ ವೆಬ್‌ಸೈಟ್‌ನಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ನ್ಯೂಸ್‌ ನೆಕ್ಸ್ಟ್‌ ( News Next Digital) ಸುದ್ದಿ ವಾಹಿನಿಯಲ್ಲಿ ನಿರೂಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೋಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು. More »