Kundapur Bus Accident : ಕುಂದಾಪುರ : ವಿದ್ಯಾರ್ಥಿಗಳಿದ್ದ ಬಸ್ ಉರುಳಿ ಅಪಘಾತ, ತಪ್ಪಿದ ಭಾರೀ ಅನಾಹುತ

Kundapur Bus Accident : ಕುಂದಾಪುರ : ಕಾಲೇಜು ವಿದ್ಯಾರ್ಥಿಗಳಿದ್ದ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಘಟನೆ ಉಡುಪಿ ಜಿಲ್ಲೆಯ ಹಳ್ಳಿಹೊಳೆ ಸಮೀಪದ ಶೆಟ್ಟಿಪಾಲು ಎಂಬಲ್ಲಿ ನಡೆದಿದೆ.

ಸೋಮವಾರ ಹಳ್ಳಿಹೊಳೆ ಗ್ರಾಮದ ಸುಳಗೋಡು ಶಾಲೆಯಲ್ಲಿ ನಡೆಯುತ್ತಿದ್ದ ಎನ್ಎಸ್ಎಸ್‌ ಶಿಬಿರಕ್ಕೆ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ವೇಳೆಯಲ್ಲಿ ಅಪಘಾತ ಸಂಭವಿಸಿದೆ.

ಚಾಲಕನ ನಿಯಂತ್ರಣ ತಪ್ಪಿದ ಬಸ್ ಉರುಳಿ ಬಿದ್ದಿದ್ದು, ಈ ವೇಳೆ ತೆಂಗಿನ ಮರಕ್ಕೆ ಢಿಕ್ಕಿಯಾಗಿ ನಿಂತಿದ್ದರಿಂದ ಭಾರೀ ಅನಾಹುತ ತಪ್ಪಿದೆ ಎಂದು ತಿಳಿದುಬಂದಿದೆ.

Also Read : ದಲಿತ ದಂಪತಿಗಳ ಪಾದ ತೊಳೆದ ಬಿಜೆಪಿ ಶಾಸಕ: ಬೈಂದೂರಿನಲ್ಲಿ ಗುರುರಾಜ್ ಗಂಟಿಹೊಳೆ ಹೊಸ ಇತಿಹಾಸ

ಅಪಘಾತದಲ್ಲಿ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಬಸ್ಸಿನ ಮುಂಭಾಗಕ್ಕೆ ಹಾನಿಯಾಗಿದೆ. ಗಾಯಗೊಂಡ ವಿದ್ಯಾರ್ಥಿಗಳಿಗೆ ಚಿಕಿತ್ಸೆ ಕೊಡಿಸಲಾಗಿದೆ. ಆದರೆ ಈ ಕುರಿತು ಯಾವುದೇ ಅಧಿಕೃತ ದೂರು ದಾಖಲಾಗಿಲ್ಲ ಎಂದು ತಿಳಿದುಬಂದಿದೆ

Also Read : ಉಡುಪಿ ಜಿಲ್ಲಾ ರೈತ ಸಂಘದಿಂದ ಸಿದ್ದಾಪುರ ಏತ ನೀರಾವರಿ ಯೋಜನೆ ಕಾಮಗಾರಿ ವೀಕ್ಷಣೆ: ಸ್ಥಳ ಪರಿಶೀಲನೆ

Kundapur Bus carrying students overturns a major disaster averted

Ashwath Acharya | ಅಶ್ವಥ್ ಆಚಾರ್ಯ

ನ್ಯೂಸ್‌ ನೆಕ್ಸ್ಟ್‌ನ ಹಿರಿಯ ವರದಿಗಾರರಾಗಿರುವ ಅಶ್ವಥ್‌ ಆಚಾರ್ಯ ಅವರು ಪತ್ರಕರ್ತರಾಗಿ ಸುಮಾರು 20 ವರ್ಷಗಳ ಅನುಭವ ಹೊಂದಿದ್ದಾರೆ. ಕರ್ನಾಟಕದ ಪ್ರಖ್ಯಾತ ಸುದ್ದಿವಾಹಿನಿ, ಕನ್ನಡ ಪ್ರತಿಷ್ಠಿತ ದಿನ ಪತ್ರಿಕೆಗಳಲ್ಲಿ ಹಾಗೂ ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. More »

Related Stories