Kundapur Fire Accident : ಕುಂದಾಪುರ : ಪಟಾಕಿ ಅಂಗಡಿಯಲ್ಲಿ ಭೀಕರ ಅಗ್ನಿ ಅವಘಡ

Kundapur Fire Accident : ಕುಂದಾಪುರ : ಪಟಾಕಿ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಇಡೀ ಕಟ್ಟಡವೇ ಹೊತ್ತಿ ಉರಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ನಡೆದಿದೆ. ನಿರಂತರ ಸ್ಪೋಟದಿಂದಾಗಿ ಸ್ಥಳದಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ.

ಕುಂದಾಪುರದ ವೆಂಕಟರಮಣ ದೇವಸ್ಥಾನದ ಸಮೀಪದ ಪಟಾಕಿ ಅಂಗಡಿಗೆ ಮುಂಜಾನೆ 3 ಗಂಟೆಯ ಸುಮಾರಿಗೆ ಬೆಂಕಿ ತಗುಲಿದೆ. ಸ್ಪೋಟಕ ವಸ್ತುಗಳು ಇದ್ದ ಕಾರಣದಿಂದಾಗಿ ಬೆಂಕಿ ಇಡೀ ಕಟ್ಟಡಕ್ಕೆ ವ್ಯಾಪಿಸಿತ್ತು. ಅಂಗಡಿ ಕಟ್ಟಡವೇ ಹೊತ್ತಿ ಉರಿದಿದೆ.

ಪಟಾಕಿಯ ಸ್ಪೋಟದಿಂದಾಗಿ ಸುತ್ತಮುತ್ತಲಿನ ಜನರಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗಿತ್ತು. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಅಗ್ನಿ ಅವಘಡದಿಂದಾಗಿ ಎಷ್ಟು ನಷ್ಟ ಸಂಭವಿಸಿದೆ ಅನ್ನುವ ಕುರಿತು ಪೊಲೀಸ್‌ ಇಲಾಖೆ ಹಾಗೂ ಅಗ್ನಿಶಾಮಕ ದಳ ಪರಿಶೀಲನೆಯನ್ನು ನಡೆಸುತ್ತಿದೆ.

ಅಪಾರ ಪ್ರಮಾಣದ ಪಟಾಕಿ ದಾಸ್ತಾನು ಇರಿಸಲಾಗಿದ್ದು, ಯಾವ ಕಾರಣದಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಅನ್ನೋದು ತಿಳಿದು ಬಂದಿಲ್ಲ. ಈ ಕುರಿತು ತನಿಖೆ ನಡೆಯುತ್ತಿದೆ.

Kundapur Fire Accident : ಪುಸ್ತಕ ಅಂಗಡಿಗೂ ವ್ಯಾಪಿಸಿದ ಬೆಂಕಿ

ಜಗದೀಶ್‌ ಭಟ್‌ ಅವರಿಗೆ ಸೇರಿದ ಪುಸ್ತಕ ಹಾಗೂ ಪಟಾಕಿ ಅಂಗಡಿಗೂ ಬೆಂಕಿ ವ್ಯಾಪಿಸಿದೆ. ಮಾತ್ರವಲ್ಲದೇ ದಿವಾಕರ ಭಟ್‌ ಕೇಶವ ಭಟ್‌ ಎಂಬವರಿಗೆ ಸೇರಿದ ಅಂಗಡಿಗೂ ಹಾನಿಯಾಗಿದ್ದು, ಲಕ್ಷಾಂತರ ಮೌಲ್ಯದ ಪಟಾಕಿ ಹಾಗೂ ಸ್ಟೇಷನರಿ ವಸ್ತುಗಳು ಬೆಂಕಿಯ ಕೆನ್ನಾಲಗೆಗೆ ಸುಟ್ಟು ಕರಕಲಾಗಿದೆ.

ಸದ್ಯಕ್ಕೆ ಶಾರ್ಟ್‌ ಸರ್ಕ್ಯೂಟ್‌ನಿಂದ ಈ ಅವಘಡ ಸಂಭವಿಸಿದೆ ಎನ್ನಲಾಗುತ್ತಿದೆ. ಕುಂದಾಪುರ ಠಾಣೆಯ ಈ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ.

Kundapur Fire in Crackers Shop Today Kannada News

Ashwath Acharya | ಅಶ್ವಥ್ ಆಚಾರ್ಯ

ನ್ಯೂಸ್‌ ನೆಕ್ಸ್ಟ್‌ನ ಹಿರಿಯ ವರದಿಗಾರರಾಗಿರುವ ಅಶ್ವಥ್‌ ಆಚಾರ್ಯ ಅವರು ಪತ್ರಕರ್ತರಾಗಿ ಸುಮಾರು 20 ವರ್ಷಗಳ ಅನುಭವ ಹೊಂದಿದ್ದಾರೆ. ಕರ್ನಾಟಕದ ಪ್ರಖ್ಯಾತ ಸುದ್ದಿವಾಹಿನಿ, ಕನ್ನಡ ಪ್ರತಿಷ್ಠಿತ ದಿನ ಪತ್ರಿಕೆಗಳಲ್ಲಿ ಹಾಗೂ ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. More »

Related Stories