ಕುಂದಾಪುರ: ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್-ಇಬ್ಬರ ಬಂಧನ

Kundapur Viral Video Case | Udupi News: ಉಡುಪಿ: ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕನ ಹೇಳಿಕೆಯನ್ನು ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಶಶಾಂಕ ಭಂಡಾರಿ (30) ಮತ್ತು ಪ್ರಮೋದ ಡಿಸೋಜ (25) ಬಂಧಿತರು.

ಫೆ.22ರಂದು ಸಂಜೆ ಕಂಡ್ಲೂರು ಪೇಟೆಯಲ್ಲಿರುವ ಕಟಿಂಗ್ ಶಾಪ್‌ನಲ್ಲಿ ಬಿಹಾರ ಮೂಲದ ಕಾನೂನು ಸಂಘರ್ಷಕ್ಕೊಳಗಾದ ಬಾಲಕನ ಮಾತನ್ನು ವಿಡಿಯೋ ಮಾಡಿ, ಸಾರ್ವಜನಿಕರಲ್ಲಿ ಪ್ರಚೋದನೆ ಮೂಡಿಸುವ ಉದ್ದೇಶದಿಂದ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಬಗ್ಗೆ ಬಾಲಕನ ತಂದೆ ನೀಡಿದ ದೂರಿನ ಮೇರೆಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿ ಕಟಿಂಗ್ ಶಾಪ್ ಎದುರು ಜನರು ಗುಂಪುಗೂಡಿ ಬೆದರಿಕೆ ಹಾಕಿರುವ ಕುರಿತು ಶಾಪ್ ಮಾಲೀಕ ಶಶಾಂಕ ಭಂಡಾರಿ ನೀಡಿದ ದೂರಿನ ಆಧಾರದ ಮೇಲೆ ಮತ್ತೊಂದು ಪ್ರಕರಣ ದಾಖಲಿಸಲಾಗಿದೆ. ಘಟನೆಯಲ್ಲಿ ಭಾಗಿಯಾಗಿದ್ದ 20–30 ಜನರನ್ನು ಗುರುತಿಸಲಾಗಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದ್ದು, ಇನ್ನೂ 25–30 ಜನರನ್ನು ಗುರುತಿಸುವ ಕಾರ್ಯ ಮುಂದುವರಿದಿದೆ.

ಎಸ್​ಎಸ್​ಎಲ್​ಸಿ ವಿದ್ಯಾರ್ಥಿ ಸಂಕೇತ್​ ಕೊಲೆ ಪ್ರಕರಣ : ಅನ್ಯಕೋಮಿನ ಐವರು ವಿದ್ಯಾರ್ಥಿಗಳು ವಶಕ್ಕೆ

ಪ್ರಕರಣ ಸಂಬಂಧ ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಆರೋಪಿಗಳಾದ ಶಶಾಂಕ ಭಂಡಾರಿ (30) ಮತ್ತು ಪ್ರಮೋದ ಡಿಸೋಜ (25) ಅವರನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Vidhya | ವಿದ್ಯಾಶ್ರೀ

ವಿದ್ಯಾಶ್ರೀ ಅವರು ನ್ಯೂಸ್‌ ನೆಕ್ಸ್ಟ್‌ ಕನ್ನಡ ( Kannada News Next) ದಲ್ಲಿ ಕಂಟೆಂಟ್‌ ಕ್ರಿಯೆಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಕನ್ನಡದ ನ್ಯೂಸ್‌ ಚಾನೆಲ್‌, ದಿನ ಪತ್ರಿಕೆ ಹಾಗೂ ಡಿಜಿಟಲ್‌ ಮಾಧ್ಯಮದಲ್ಲಿ ಹಲವು ವರ್ಷಗಳ ಕಾಲ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.

Related Stories