ಕುಂದಾಪುರದಲ್ಲಿ ‘ಸೇವಾ ಸಂಕಲ್ಪ’: ಬಡ ವಿದ್ಯಾರ್ಥಿಗಳ ಭವಿಷ್ಯಕ್ಕೆ ₹93.64 ಲಕ್ಷದ ಆಸರೆ ನೀಡಿದ ಸಂಪತ್ ಶೆಟ್ಟಿ

ಸಂಪತ್‌ ಶೆಟ್ಟಿ ಅವರ ನೇತೃತ್ವದಲ್ಲಿ ನಡೆದ ಸೇವಾ ಸಂಕಲ್ಪ ಕಾರ್ಯಕ್ರಮದಲ್ಲಿ ಒಟ್ಟು 93 ಲಕ್ಷಕ್ಕೂ ಅಧಿಕ ಸವಲತ್ತುಗಳನ್ನು ವಿತರಿಸಲಾಯ್ತು. ಅದ್ರಲ್ಲೂ ಕುಂದಾಪುರದ ಬಿ.ಬಿ. ಹೆಗ್ಡೆ ಕಾಲೇಜಿಗೆ 50 ಅತ್ಯಾಧುನಿಕ ಕಂಪ್ಯೂಟರ್‌ಗಳು ಹಾಗೂ 6 ಸರ್ಕಾರಿ ಶಾಲೆಗಳಿಗೆ ಉಚಿತ ಕಂಪ್ಯೂಟರ್‌ಗಳನ್ನು ನೀಡಲಾಯಿತು.

ಕುಂದಾಪುರ: ಪ್ರತಿಭೆ, ಸಾಮರ್ಥ್ಯ ಮತ್ತು ಕಲಿಯುವ ಹಂಬಲ ಇರುವವರಿಗೆ ಇಂದಿನ ದಿನಗಳಲ್ಲಿ ಬಡತನ ಎಂದಿಗೂ ಅಡ್ಡಿಯಾಗುವುದಿಲ್ಲ. ಸಮಾಜದಲ್ಲಿ ಒಳ್ಳೆಯ ಕೆಲಸ ಮಾಡುವವರನ್ನು ಗುರುತಿಸಿ ಪ್ರೋತ್ಸಾಹಿಸುವುದು ನಮ್ಮೆಲ್ಲರ ಜವಾಬ್ದಾರಿ” ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಉಡುಪಿ ಜಿಲ್ಲೆಯ ಕೋಟೇಶ್ವರದಲ್ಲಿರುವ ಯುವ ಮೆರಿಡಿಯನ್ ಗ್ರ್ಯಾಂಮಿ ಬಾಲ್‌ರೂಮ್‌ನಡೆದ ಶ್ರೀ ಕೃಷ್ಣಪ್ರಸಾದ್ ಗ್ರೂಪ್ ಆಫ್ ಇಂಡಸ್ಟ್ರೀಸ್ ಹಾಗೂ ಶ್ರೀ ಕೃಷ್ಣಪ್ರಸಾದ್ ಫೌಂಡೇಶನ್ (ವಂಡಾರು-ಬ್ರಹ್ಮಾವರ) ಕೈಗೊಂಡಿದ್ದ ‘ಸೇವಾ ಸಂಕಲ್ಪ’ ಉದ್ಘಾಟಿಸಿ ಮಾತನಾಡಿದ್ರು.

kundapura Vandaru Sri Krishnaprasad Foundation donates 93 lakh aid distribution

ಟಿ.ಎ. ಪೈ, ಶ್ರೀನಿವಾಸ ಮಲ್ಯ ಹಾಗೂ ಜಾರ್ಜ್ ಫರ್ನಾಂಡಿಸ್ ಅವರಂತಹ ದಾರ್ಶನಿಕ ನಾಯಕರ ಹಾದಿಯಲ್ಲೇ ಕರಾವಳಿ ಭಾಗವು ಇಂದು ಶೈಕ್ಷಣಿಕ ಹಾಗೂ ಆರ್ಥಿಕ ಪ್ರಗತಿ ಸಾಧಿಸುತ್ತಿದೆ ಎಂದು ಸಂಸದರು ಸ್ಮರಿಸಿದರು. ಇದೇ ವೇಳೆ, ಸಾವಿರಾರು ಬಡ ವಿದ್ಯಾರ್ಥಿಗಳಿಗೆ ನೆರವಾಗುವುದರ ಜೊತೆಗೆ 4,000ಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಿದ ಉದ್ಯಮಿ ಸಂಪತ್ ಶೆಟ್ಟಿ ಅವರ ಕಾರ್ಯವನ್ನು ಮುಕ್ತಕಂಠದಿಂದ ಶ್ಲಾಘಿಸಿದರು.

ಬಡ ಮಕ್ಕಳ ಶಿಕ್ಷಣಕ್ಕೆ ಸಂಪತ್ ಶೆಟ್ಟಿ ಆದಾಯದ ಒಂದು ಭಾಗ ಮೀಸಲು

ಕುಂದಾಪುರ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಅವರು, ಸರಕಾರಗಳು ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಬೇಕಾಗಿದೆ. ಈ ಹೊತ್ತಿನಲ್ಲಿ ಉದ್ಯಮಿ ಸಂಪತ್ ಶೆಟ್ಟಿ ಅವರು ತಮ್ಮ ಆದಾಯದ ಒಂದು ಭಾಗವನ್ನು ಸಮಾಜ ಸೇವೆಗೆ ಮೀಸಲಿಟ್ಟು, ವಿದ್ಯಾರ್ಥಿವೇತನ ಹಾಗೂ ದತ್ತು ಸ್ವೀಕಾರದಂತಹ ಮಾದರಿ ಯೋಜನೆಗಳನ್ನು ಹಮ್ಮಿಕೊಂಡಿರುವುದು ಹೆಮ್ಮೆಯ ಸಂಗತಿ” ಎಂದರು.

kundapura Vandaru Sri Krishnaprasad Foundation donates 93 lakh aid distribution

ನನ್ನ ವಿದ್ಯಾರ್ಥಿಗಳು ಐಎಎಸ್, ಐಪಿಎಸ್ ಅಧಿಕಾರಿಗಳಾಗಬೇಕು – ಸಂಪತ್ ಶೆಟ್ಟಿ

ಶ್ರೀ ಕೃಷ್ಣಪ್ರಸಾದ್ ಗ್ರೂಪ್ ಆಫ್ ಇಂಡಸ್ಟ್ರೀಸ್ ಚೇರ್ಮನ್ ಆಗಿರುವ ಸಂಪತ್‌ ಶೆಟ್ಟಿ ಅವರು ಸೇವಾ ಸಂಕಲ್ಪ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು. ಸಮಾಜದಲ್ಲಿ ಬದಲಾವಣೆಯನ್ನು ತರಲು ಶಿಕ್ಷಣದಿಂದ ಮಾತ್ರವೇ ಸಾಧ್ಯ, ಪ್ರತಿಭಾವಂತ ಬಡ ಮಕ್ಕಳ ಕನಸುಗಳಿಗೆ ರೆಕ್ಕೆ ನೀಡಲು ನಾವು ಈ ಸೇವಾ ಸಂಕಲ್ಪ ಹಮ್ಮಿಕೊಂಡಿದ್ದೇವೆ. ನಮ್ಮ ಸಂಸ್ಥೆಯಿಂದ ನೆರವು ಪಡೆದ ವಿದ್ಯಾರ್ಥಿಗಳು ಮುಂದೆ ದೇಶ ಮೆಚ್ಚುವ ಐಎಎಸ್, ಐಪಿಎಸ್ ಅಧಿಕಾರಿಗಳಾಗಿ ಬೆಳೆಯಬೇಕು ಎನ್ನುವುದೇ ನನ್ನ ದೊಡ್ಡ ಆಶಯ” ಎಂದು ಭಾವನಾತ್ಮಕವಾಗಿ ನುಡಿದರು.

₹93.64 ಲಕ್ಷ ಮೌಲ್ಯದ ಭರ್ಜರಿ ನೆರವು ವಿತರಿಸಿದ ಸೇವಾ ಸಂಕಲ್ಪ

ಸಂಪತ್‌ ಶೆಟ್ಟಿ ಅವರ ನೇತೃತ್ವದಲ್ಲಿ ನಡೆದ ಸೇವಾ ಸಂಕಲ್ಪ ಕಾರ್ಯಕ್ರಮದಲ್ಲಿ ಒಟ್ಟು 93 ಲಕ್ಷಕ್ಕೂ ಅಧಿಕ ಸವಲತ್ತುಗಳನ್ನು ವಿತರಿಸಲಾಯ್ತು. ಅದ್ರಲ್ಲೂ ಕುಂದಾಪುರದ ಬಿ.ಬಿ. ಹೆಗ್ಡೆ ಕಾಲೇಜಿಗೆ 50 ಅತ್ಯಾಧುನಿಕ ಕಂಪ್ಯೂಟರ್‌ಗಳು ಹಾಗೂ 6 ಸರ್ಕಾರಿ ಶಾಲೆಗಳಿಗೆ ಉಚಿತ ಕಂಪ್ಯೂಟರ್‌ಗಳನ್ನು ನೀಡಲಾಯಿತು.

kundapura Vandaru Sri Krishnaprasad Foundation donates 93 lakh aid distribution

ಅಲ್ಲದೇ ಕಲ್ಲಡ್ಕ ಶ್ರೀ ರಾಮ ವಿದ್ಯಾಕೇಂದ್ರಕ್ಕೆ ಆರ್ಥಿಕ ನೆರವು, ಅತಿಥಿ ಶಿಕ್ಷಕರಿಗೆ ವೇತನ ಭತ್ಯೆ, ಬಡವರಿಗಾಗಿ ವೈದ್ಯಕೀಯ ಚಿಕಿತ್ಸಾ ವೆಚ್ಚ ಹಾಗೂ ಶಾಲಾ ಮಕ್ಕಳಿಗೆ ಪುಸ್ತಕ, ಬ್ಯಾಗ್, ಕೊಡೆಗಳನ್ನು ವಿತರಿಸಲಾಯಿತು. ವಿಶೇಷವಾಗಿ 2025-26 ಹಾಗೂ 2026-27ನೇ ಸಾಲಿನ ಒಟ್ಟು 19 ಬಡ ವಿದ್ಯಾರ್ಥಿಗಳನ್ನು ಉನ್ನತ ಶಿಕ್ಷಣಕ್ಕಾಗಿ ದತ್ತು ಸ್ವೀಕರಿಸಲಾಯಿತು.

ಉದ್ಯಮಿ ದಿನೇಶ್ ಹೆಗ್ಡೆ ಮೊಳಹಳ್ಳಿ, ಜನಸೇವಾ ಟ್ರಸ್ಟ್ ಅಧ್ಯಕ್ಷ ವಸಂತ ಗಿಳಿಯಾರ್, ಪ್ರಾಂಶುಪಾಲ ಡಾ. ಕೊತ್ತಾಡಿ ಉಮೇಶ್ ಶೆಟ್ಟಿ, ಯುವ ಮೆರಿಡಿಯನ್ ಆಡಳಿತ ನಿರ್ದೇಶಕರಾದ ಬಿ. ಉದಯಕುಮಾರ್ ಶೆಟ್ಟಿ, ಬಿ. ವಿನಯಕುಮಾರ್ ಶೆಟ್ಟಿ, ಪತ್ರಕರ್ತ ರಾಜೇಶ್ ಕೆ.ಸಿ., ನ್ಯಾಯವಾದಿ ಶಿರಿಯಾರ ಗೋಪಾಲಕೃಷ್ಣ ಶೆಟ್ಟಿ ಹಾಗೂ ಸೋನಾಲಿ ಎಸ್. ಶೆಟ್ಟಿ ಉಪಸ್ಥಿತರಿದ್ದರು. ಸಂತೋಷ್ ಶೆಟ್ಟಿ ಎಳ್ಳಂಪಳ್ಳಿ ಕಾರ್ಯಕ್ರಮ ನಿರೂಪಿಸಿದರೆ, ಶ್ರೀನಿವಾಸ ಶೆಟ್ಟಿ ವಂದಿಸಿದರು.

Darshan Shetty Narkali | ದರ್ಶನ್‌ ಶೆಟ್ಟಿ ನಾರ್ಕಳಿ

ದರ್ಶನ್‌ ಶೆಟ್ಟಿ ನಾರ್ಕಳಿ (Darshan Shetty Narkali) ಅವರು ನ್ಯೂಸ್‌ ನೆಕ್ಸ್ಟ್ ಕನ್ನಡ ( News Next Kannada) ವಿಭಾಗದ ಪತ್ರಕರ್ತ. ಮಂಗಳೂರು ವಿವಿಯಲ್ಲಿ ಪದವಿ ಪಡೆದಿದ್ದಾರೆ. ಕಳೆದ 1 ವರ್ಷಗಳಿಂದ ವೆಬ್‌ಸೈಟ್‌ನಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ನ್ಯೂಸ್‌ ನೆಕ್ಸ್ಟ್‌ ( News Next Digital) ಸುದ್ದಿ ವಾಹಿನಿಯಲ್ಲಿ ನಿರೂಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೋಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು. More »

Related Stories