ಉಡುಪಿ :ಊಟ ಮುಗಿಸಿ ಮಲಗಲು ತೆರಳಿದ್ದ ಯುವತಿ ಆತ್ಮಹತ್ಯೆ

ಭಾಗ್ಯಶ್ರೀ ಗಾಣಿಗ (23) ಮೃತ ಯುವತಿ ಎಂದು ಗುರುತಿಸಲಾಗಿದೆ. ತಮ್ಮ ಮನೆಯಲ್ಲಿ ಕೋಣೆಯ ಫ್ಯಾನ್‌ಗೆ ಸೀರೆಯಿಂದ  ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ

ಉಡುಪಿ : ಬೈಂದೂರು  ತಾಲೂಕಿನ ತಗ್ಗರ್ಸೆ ಗ್ರಾಮದ ಭೂಸಕ್ರಡಿ ಹಾಲಂಬೇರು ಪ್ರದೇಶದಲ್ಲಿ ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಭಾಗ್ಯಶ್ರೀ ಗಾಣಿಗ (23) ಮೃತ ಯುವತಿ ಎಂದು ಗುರುತಿಸಲಾಗಿದೆ. ತಮ್ಮ ಮನೆಯಲ್ಲಿ ಕೋಣೆಯ ಫ್ಯಾನ್‌ಗೆ ಸೀರೆಯಿಂದ  ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ : ಸರ್ಕಾರಿ ಶಾಲಾ – ಕಾಲೇಜುಗಳ ವಿದ್ಯಾರ್ಥಿಗಳಿಗೆ ಶೀಘ್ರದಲ್ಲೇ ಗುಡ್​ನ್ಯೂಸ್​..! ದ್ವಿತೀಯ ಪಿಯುಸಿವರೆಗೆ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಭಾಗ್ಯ

ಗುಡ್ಡೇಅಂಗಡಿಯ ಇಂಟರ್‌ಲಾಕ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಭಾಗ್ಯಶ್ರೀ ಅವರು ಏಪ್ರಿಲ್ 3ರಂದು ರಾತ್ರಿ 10 ಗಂಟೆಗೆ ಮನೆಯವರೊಂದಿಗೆ ಊಟ ಮುಗಿಸಿ ಮೇಲ್ಮಹಡಿಯ ತಮ್ಮ ಕೋಣೆಗೆ ಮಲಗಲು ತೆರಳಿದ್ದರು. ಸುಮಾರು 10.15ರ ಸುಮಾರಿಗೆ ಅಕ್ಕ ಜಯಶ್ರೀ ಅವರು ಹಾಲು ನೀಡಲು ಕೋಣೆಗೆ ಹೋದಾಗ ಘಟನೆ ಬೆಳಕಿಗೆ ಬಂದಿದೆ.

ತಕ್ಷಣವೇ ಅವರನ್ನು ಕೆಳಗಿಳಿಸಿ ಬೈಂದೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಷ್ಟರಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ : ಬ್ರಹ್ಮಾವರ: ಫೋಟೋಗ್ರಾಫರ್ ಆತ್ಮಹತ್ಯೆ: ಶೂಟಿಂಗ್ ಮುಗಿಸಿ ಮನೆಗೆ ಬಂದ ಬೆನ್ನಲ್ಲೇ ದುರಂತ

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತರ ಅಕ್ಕ ಜಯಶ್ರೀ ನೀಡಿದ ದೂರಿನ ಮೇರೆಗೆ ಬೈಂದೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Udupi A young woman committed suicide after finishing her meal and going to bed

Meghana Pranuth | ಮೇಘನಾ ಪ್ರಣೂತ್‌

ಮೇಘನಾ ಪ್ರಣೂತ್‌ ಮೂಲತಃ ಉಡುಪಿ ಜಿಲ್ಲೆಯವರು. ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣವನ್ನು ಪಡೆದಿದ್ದು, ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಸಿನಿಮಾ, ಕ್ರೀಡೆ, ವಾಣಿಜ್ಯ, ಫ್ಯಾಷನ್‌ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದಾರೆ. ಇದೀಗ ನ್ಯೂಸ್‌ ನೆಕ್ಸ್ಟ್‌ನಲ್ಲಿ ನಿರೂಪಕರಾಗಿ, ಕಂಟೆಂಟ್‌ ಕ್ರಿಯೆಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ.

Related Stories