ಮಹೇಶ್‌ ಶೆಟ್ಟಿ ತಿಮರೋಡಿಗೆ 2 ದಿನ ನ್ಯಾಯಾಂಗ ಬಂಧನ : ಎಂಡಿ ಸಮೀರ್‌ಗೆ ಬಿಗ್‌ ರಿಲೀಫ್‌

ಬ್ರಹ್ಮಾವರ : ಧರ್ಮಸ್ಥಳ ವಿರೋಧಿ ಹೋರಾಟಗಾರ, ಸೌಜನ್ಯ ಪರ ಹೋರಾಟಗಾರರಾಗಿರುವ ಮಹೇಶ್ ಶೆಟ್ಟಿ ತಿಮರೋಡಿ (Mahesh Shetty Timarodi )ಗೆ 2 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಬ್ರಹ್ಮಾವರ ನ್ಯಾಯಾಲಯ ಆದೇಶ ಹೊರಡಿಸಿದೆ. ಇನ್ನೊಂದಡೆಯಲ್ಲಿ ಯೂಟ್ಯೂಬರ್‌ ಸಮೀರ್‌ (Sameer MD) ಗೆ ಮಂಗಳೂರು ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.‌

ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಮುಖಂಡರಾಗಿರುವ ಬಿ.ಎಲ್.ಸಂತೋಷ್‌ ಅವರ ವಿರುದ್ದ ಮಹೇಶ್‌ ತಿಮರೋಡಿ ಅವಹೇಳನಕಾರಿ ಹೇಳಿಕೆ ನೀಡಿದ್ದರು.
ಯೂಟ್ಯೂಬ್‌ ಸಂದರ್ಶನದಲ್ಲಿ ಅವಹೇಳನ ಮಾಡುತ್ತಿದ್ದಂತೆಯೇ ಬಿಜೆಪಿ ಮುಖಂಡರು ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ತಿಮರೋಡಿ ವಿರುದ್ದ ಪ್ರಕರಣ ದಾಖಲು ಮಾಡಿದ್ದರು.

ಬ್ರಹ್ಮಾವರ ಪೊಲೀಸರು ನೋಟಿಸ್‌ ನೀಡಿದ್ದರೂ ಕೂಡ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿದ್ದರು. ಬ್ರಹ್ಮಾವರ ಠಾಣೆಯಲ್ಲಿ ಸುಧೀರ್ಘ ವಿಚಾರಣೆ ನಡೆಸಲಾಗಿತ್ತು.

ಇದನ್ನೂ ಓದಿ : ಮಹೇಶ್‌ ತಿಮರೋಡಿ ಅರೆಸ್ಟ್‌

ಬ್ರಹ್ಮಾವರ ಪೊಲೀಸರು ವಿಚಾರಣೆ ನಂತರ ಬ್ರಹ್ಮಾವರ ನ್ಯಾಯಾಲಯಕ್ಕೆ ತಿಮರೋಡಿಯನ್ನು ಹಾಜರುಪಡಿಸಿದ್ದರು. ನ್ಯಾಯಾಲಯ ಅಗಸ್ಟ್‌ 23ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ಮಹೇಶ್‌ ಶೆಟ್ಟಿ ತಿಮರೋಡಿಯನ್ನು ಬಂಧಿಸಿ ಕರೆ ತರುವ ಸುದ್ದಿ ಕೇಳುತ್ತಲೇ ಅಭಿಮಾನಿಗಳು ಬ್ರಹ್ಮಾವರ ಪೊಲೀಸ್‌ ಠಾಣೆಗೆ ಜಮಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಠಾಣೆಗೆ ಬಿಗಿ ಪೊಲೀಸ್‌ ಭದ್ರತೆಯನ್ನು ಒದಗಿಸಲಾಗಿತ್ತು.

ಯೂಟ್ಯೂಬರ್‌ ಸಮೀರ್‌ಗೆ ಜಾಮೀನು

ಒಂದಡೆ ಮಹೇಶ್‌ ಶೆಟ್ಟಿ ತಿಮರೋಡಿಯನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದರೆ, ಮತ್ತೊಂದೆಡೆಯಲ್ಲಿ ಬೆಳ್ತಂಗಡಿ ಠಾಣೆಯ ಪೊಲೀಸರು ಧರ್ಮಸ್ಥಳದ ವಿರುದ್ದ ಹೇಳಿಕೆ ನೀಡಿದ್ದ ಸಮೀರ್‌ ಎಂಡಿ ಬಂಧನಕ್ಕೆ ಮುಂದಾಗಿದ್ದರು.

ಇದನ್ನೂ ಓದಿ : ಮಹೇಶ್‌ ಶೆಟ್ಟಿ ತಿಮರೋಡಿ ಬಂಧನ, ಬ್ರಹ್ಮಾವರ ಠಾಣೆಯ ಮುಂದೆ ಬಿಗಿ ಪೊಲೀಸ್‌ ಭದ್ರತೆ

ಬೆಳ್ತಂಗಡಿ ಪೊಲೀಸರು ಬೆಂಗಳೂರಿನಲ್ಲಿರುವ ಸಮೀರ್‌ ಎಂಡಿ ಮನೆಗೆ ತೆರಳಿ ಬಂಧನಕ್ಕೆ ಮುಂದಾಗಿದ್ದರು. ಆದರೆ ಮಂಗಳೂರು ನ್ಯಾಯಾಲಯ ಸಮೀರ್‌ ಎಂಡಿಗೆ ಅವರಿಗೆ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.

Mahesh Shetty Timarodi remanded in judicial custody for 2 days: Big relief for Sameer MD

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories