ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನ ಜೈಲು : ಜಾಮೀನು ಅರ್ಜಿ ವಜಾ, ಮುಂದಿನ ಆಯ್ಕೆಗಳೇನು ?

ಬ್ರಹ್ಮಾವರ : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ (Mahesh Shetty Timarodi) ಜೈಲು ಸೇರಿದ್ದಾರೆ. ಬ್ರಹ್ಮಾವರ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.
ನ್ಯಾಯಾಲಯ ಈಗಾಗಲೇ 14 ದಿನಗಳ ನ್ಯಾಯಾಂಗ ಬಂಧನಕ್ಕೆ ವಿಧಿಸಿ ಆದೇಶ ಹೊರಡಿಸಿದೆ. ಹೀಗಾಗಿ ಅವರು ಹಿರಿಯಡ್ಕ ಜೈಲು ಸೇರಿದ್ದಾರೆ. ಹಾಗಾದ್ರೆ ಮಹೇಶ್ ಶೆಟ್ಟಿ ತಿಮರೋಡಿ ಮುಂದೇನು ಮಾಡ್ತಾರೆ ಅನ್ನೋ ಡಿಟೇಲ್ಸ್ ಇಲ್ಲಿದೆ.
ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬ್ರಹ್ಮಾವರ ಠಾಣೆಯ ಪೊಲೀಸರು ಬಂಧಿಸಿದ್ದರು.
ಮಹೇಶ್ ಶೆಟ್ಟಿ ತಿಮರೋಡಿ ಅವರ ವಿರುದ್ದ ಬ್ರಹ್ಮಾವರ ಠಾಣೆಯ ಪೊಲೀಸರು ಐಪಿಸಿ ಸೆಕ್ಷನ್ 504 ಮತ್ತು 506ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರ ನಿವಾಸದಿಂದ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆತಂದ ಪೊಲೀಸರು ಸುದೀರ್ಘ ವಿಚಾರಣೆಯನ್ನು ನಡೆಸಿದ್ದಾರೆ. ನಂತರ ಬ್ರಹ್ಮಾವರ ನ್ಯಾಯಾಲಯಲ್ಲಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದಾರೆ.
ಇದನ್ನೂ ಓದಿ : ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಂಗ ಬಂಧನ : ಸಮೀರ್ಗೆ ಬಿಗ್ ರಿಲೀಫ್
ಬ್ರಹ್ಮಾವರ ನ್ಯಾಯಾಲವು ಮಹೇಶ್ ಶೆಟ್ಟಿ ತಿಮರೋಡಿ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಅಲ್ಲದೇ 14 ದಿನಗಳ ಕಾಲ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ನ್ಯಾಯಾಲಯದ ಈ ಆದೇಶದ ಪ್ರಕಾರ, ತಿಮರೋಡಿ ಅವರು ಆಗಸ್ಟ್ 23ರ ವರೆಗೆ ಉಡುಪಿಯ ಹಿರಿಯಡ್ಕ ಜೈಲಿನಲ್ಲಿ ಇರಲಿದ್ದಾರೆ.
ಮಹೇಶ್ ಶೆಟ್ಟಿ ತಿಮರೋಡಿ ಮುಂದಿನ ಆಯ್ಕೆಗಳೇನು ?
ಮಹೇಶ್ ಶೆಟ್ಟಿ ತಿಮರೋಡಿ (Mahesh Shetty Timarodi) ಅವರ ಬಿಡುಗಡೆಯ ಕುರಿತು ಅವರ ವಕೀಲರು ಆಗಸ್ಟ್ 23ರಂದು ಮತ್ತೆ ಜಾಮೀನು ಅರ್ಜಿ ಸಲ್ಲಿಸಲಿದ್ದಾರೆ.
ವಕೀಲರ ಪ್ರಕಾರ, ತಿಮರೋಡಿ ಅವರಿಗೆ ಬಿಪಿ ಸಮಸ್ಯೆ ಇದ್ದು, ವೈದ್ಯಕೀಯ ತಪಾಸಣೆ ನಡೆಸಲಾಗಿದೆ. ಮುಂದಿನ ವಿಚಾರಣೆಯಲ್ಲಿ ತಿಮರೋಡಿ ಅವರಿಗೆ ಜಾಮೀನು ಸಿಗುವ ಸಾಧ್ಯತೆ ಇದೆ ಎಂದು ಅವರ ವಕೀಲರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ಕರಗುತ್ತಿದೆ ಮಂಜು, ಕರ್ನಾಟಕ ಕರಾವಳಿಗೆ ಕಾದಿಗೆ ಗಂಡಾಂತರ
ಒಂದೊಮ್ಮೆ ಜಾಮೀನು ಸಿಕ್ಕರೆ ಜೈಲಿನಿಂದ ಬಿಡುಗಡೆ ಆಗಲಿದ್ದಾರೆ. ಇಲ್ಲದೇ ಇದ್ದರೆ ಅವರು ಕಾನೂನು ಹೋರಾಟ ಮುಂದುವರಿಸಲಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ಬಂಧನ ಕುರಿತು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆ ನಡೆಯುತ್ತಿದೆ.
ಈ ಘಟನೆ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ತಿಮರೋಡಿ ಅವರ ಮುಂದಿನ ನಡೆ ಮತ್ತು ಪ್ರಕರಣದ ಪರಿಣಾಮ ಏನಾಗಬಹುದು ಅನ್ನೋದು ಕುತೂಹಲ ಮೂಡಿಸಿದೆ.



