ಕ್ಯಾಬ್‌ಗೆ ಕಾಯುತ್ತಿದ್ದ ಯುವತಿ ಜೊತೆ ಅಸಭ್ಯ ವರ್ತನೆ : ವಿಡಿಯೋ ವೈರಲ್‌ ಬೆನ್ನಲ್ಲೇ ವ್ಯಾಪಾರಿ ಅರೆಸ್ಟ್‌

ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ರಸ್ತೆಯ ಬದಿಯಲ್ಲಿ ಯುವತಿಯೋರ್ವಳು ಕ್ಯಾಬ್‌ಗಾಗಿ ಕಾಯುತ್ತಿದ್ದಳು. ಈ ವೇಳೆಯಲ್ಲಿ ಸ್ಕೂಟರ್‌ನಲ್ಲಿ ಬಂದಿದ್ದ ವ್ಯಕ್ತಿಯೋರ್ವ ಆಕೆಯ ಜೊತೆಯಲ್ಲಿ ಅಸಭ್ಯವಾಗಿ ವರ್ತಿಸಿದ್ದಾನೆ. ಅಲ್ಲದೇ ಆಕೆಯ ರೇಟ್‌ ಎಷ್ಟು ಎಂದು ಕೇಳುವ ಮೂಲಕ ಕಿರುಕುಳ ನೀಡಿದ್ದಾನೆ.

ಬೆಂಗಳೂರು : ಸಿಲಿಕಾನ್‌ ಸಿಟಿಯಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲವೇ ಅನ್ನೋ ಪ್ರಶ್ನೆ ಕೇಳಿಬರುತ್ತಿದೆ. ಇದರ ಬೆನ್ನಲ್ಲೇ ಇದೀಗ ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದು ಮಾತ್ರವಲ್ಲ ಆಕೆಯ ರೇಟ್‌ ಕೇಳಿ ಕಿರುಕುಳ ನೀಡಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಇದರ ಬೆನ್ನಲ್ಲೇ ಬೆಂಗಳೂರ ನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ರಸ್ತೆಯ ಬದಿಯಲ್ಲಿ ಯುವತಿಯೋರ್ವಳು ಕ್ಯಾಬ್‌ಗಾಗಿ ಕಾಯುತ್ತಿದ್ದಳು. ಈ ವೇಳೆಯಲ್ಲಿ ಸ್ಕೂಟರ್‌ನಲ್ಲಿ ಬಂದಿದ್ದ ವ್ಯಕ್ತಿಯೋರ್ವ ಆಕೆಯ ಜೊತೆಯಲ್ಲಿ ಅಸಭ್ಯವಾಗಿ ವರ್ತಿಸಿದ್ದಾನೆ. ಅಲ್ಲದೇ ಆಕೆಯ ರೇಟ್‌ ಎಷ್ಟು ಎಂದು ಕೇಳುವ ಮೂಲಕ ಕಿರುಕುಳ ನೀಡಿದ್ದಾನೆ.

ವ್ಯಕ್ತಿಯ ವಿಕೃತ ವರ್ತನೆಯಿಂದ ಬೇಸತ್ತ ಯುವತಿ ತನ್ನ ಮೊಬೈಲ್‌ನಲ್ಲಿ ಘಟನೆಯನ್ನು ಸೆರೆ ಹಿಡಿದಿದ್ದಾಳೆ. ತಾನು ವಿಡಿಯೋ ರೆಕಾರ್ಡ್‌ ಮಾಡ್ತಾ ಇದ್ದು, ಪೊಲೀಸರಿಗೆ ದೂರು ನೀಡುವುದಾಗಿ ಬೆದರಿಕೆ ಒಡ್ಡಿದ್ದಾಳೆ. ಇದರಿಂದ ಬೆದರಿದ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಘಟನೆಯ ಬೆನ್ನಲ್ಲೇ ಬೆದರದ ಯುವತಿ ವಿಕೃತ ವ್ಯಕ್ತಿಯ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಾರೀ ವೈರಲ್‌ ಆಗಿದ್ದು, ನೆಟ್ಟಿಗರು ಆರೋಪಿ ವಿರುದ್ದ ಕ್ರಮಕ್ಕೆ ಆಗ್ರಹ ಮಾಡಿದ್ದಾರೆ. ಇದರ ಬೆನ್ನಲ್ಲೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಹಣ್ಣಿನ ವ್ಯಾಪಾರಿ ಅರೆಸ್ಟ್‌

ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ವಿಡಿಯೋದ ಬೆನ್ನಲ್ಲೇ ರಾಮಮೂರ್ತಿ ನಗರ ಪೊಲೀಸ್‌ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಕಾರ್ಯಾಚರಣೆ ಆರಂಭಿಸಿದ್ದಾರೆ. ಪೊಲೀಸರ ತೀವ್ರ ಕಾರ್ಯಾಚರಣೆಯ ನಂತರದಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ.

ಬಂಧಿತ ಆರೋಪಿಯನ್ನು ವಿಜಯ್‌ ರಾಘವ್‌ 49 ವರ್ಷ ಎಂದು ಗುರುತಿಸಲಾಗಿದೆ. ಈತ ರಾಮಮೂರ್ತಿ ನಗರದ ಎನ್‌ಆರ್‌ಐ ಲೇಔಟ್‌ ನಿವಾಸಿಯಾಗಿದ್ದು, ವೃತ್ತಿಯಲ್ಲಿ ಹಣ್ಣಿನ ವ್ಯಾಪಾರಿ ಅನ್ನೋದು ತಿಳಿದು ಬಂದಿದೆ. ಸದ್ಯ ಯುವತಿಯ ಧೈರ್ಯಕ್ಕೆ ಸಾರ್ವಜನಿಕರಿಂದ ಬಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

man arrested harassing woman waiting for cab viral video

Exit mobile version