ಹೆಗ್ಗುಂಜೆ – ಮಂದಾರ್ತಿಯಲ್ಲಿ ಹೊಸ ಸರ್ಕಾರಿ ಶಾಲೆ ಆರಂಭ : ಶಿಕ್ಷಣ ಸಚಿವರಿಗೆ ಶಾಸಕ ಕಿರಣ್ ಕೊಡ್ಗಿ ಮನವಿ

ಉಡುಪಿ: ಕುಂದಾಪುರ ವಿಧಾನಸಭಾ ಕ್ಷೇತ್ರದ ಹೆಗ್ಗುಂಜಿ ಗ್ರಾಮದ ಮಂದಾರ್ತಿಯಲ್ಲಿ ಹೊಸ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ (Heggunje government school) ಆರಂಭಿಸುವಂತೆ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಮಂದಾರ್ತಿಯಲ್ಲಿ ಈಗಿರುವ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಕೊರತೆಯಿಂದ ಶಾಲೆ ಮುಚ್ಚುವ ಸಾಧ್ಯತೆ ಇದ್ದು, ಇದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗಲಿದೆ ಎಂದು ಶಾಸಕರು ಸಚಿವರ ಗಮನಕ್ಕೆ ತಂದರು. ಸರ್ಕಾರಿ ಶಾಲೆ ಆರಂಭವಾದರೆ ಬಡ ಹಾಗೂ ಗ್ರಾಮೀಣ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.
ಇದನ್ನೂ ಓದಿ : ನಿಟ್ಟೆ ವಿಶ್ವವಿದ್ಯಾಲಯದ ದಿಶಾ ಡಿ.ಎನ್. ಅವರಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಪದವಿ ಪ್ರದಾನ
ಶಾಲೆ ಆರಂಭಕ್ಕೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳನ್ನು ಮಂದರ್ತಿ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮಂಡಳಿ ಒದಗಿಸುವುದಾಗಿ ಲಿಖಿತ ಭರವಸೆ ನೀಡಿದೆ. ಆದ್ದರಿಂದ 2026–27ನೇ ಶೈಕ್ಷಣಿಕ ವರ್ಷದಿಂದ ಹೆಗ್ಗುಂಜಿ ಗ್ರಾಮದ ಸರ್ವೆ ನಂ.167/71ಬಿ ಜಾಗದಲ್ಲಿ ಸರ್ಕಾರಿ ಶಾಲೆ ಆರಂಭಿಸಲು ಅನುಮತಿ ನೀಡುವಂತೆ ಸಚಿವರಲ್ಲಿ ವಿನಂತಿಸಿದರು.
ಇದನ್ನೂ ಓದಿ : ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ
Mandarthi Heggunje New government school to be opened in MLA Kiran Kodgi appeals to Education Minister Madu Bangarappa



