ಕಾರ್ಕಳ ಶಾಸಕ ಸುನಿಲ್ ಮನೆಗೆ ಧರ್ಮೇಂದ್ರ ಪ್ರಧಾನ ಭೇಟಿ

Dharmendra Pradhan visit Karkala : ಕಾರ್ಕಳ : ಶೃಂಗೇರಿಗೆ ಆಗಮಿಸಿದ್ದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕಾರ್ಕಳ ಶಾಸಕರಾದ ವಿ.ಸುನಿಲ್ ಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ನಿವಾಸಕ್ಕೆ ಆಗಮಿಸಿದ ಕೇಂದ್ರ ಸಚಿವರನ್ನು ಶಾಸಕ ಸುನಿಲ್ ಕುಮಾರ್, ಕುಟುಂಬಸ್ಥರು, ಬಿಜೆಪಿ ಪ್ರಮುಖರು, ಕಾರ್ಯಕರ್ತರು ಸ್ವಾಗತಿಸಿದ್ದಾರೆ.

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕೆಲ ಹೊತ್ತು ಉಭಯಕುಶಲೋಪರಿ ನಡೆಸಿದ್ದಾರೆ. ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷರಾದ ನವೀನ್ ನಾಯಕ್, ಬಿಜೆಪಿಯ ಹಿರಿಯರಾದ ಮಣಿರಾಜ್ ಶೆಟ್ಟಿ.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹಾವೀರ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಸತೀಶ್ ಬೋಳ, ಯುವಮೋರ್ಚಾ ಅಧ್ಯಕ್ಷರಾದ ರಾಕೇಶ್ ಶೆಟ್ಟಿ, ಆನಂದ ನಾಯಕ್ ಹಾಗೂ ಪಕ್ಷದ ಕಾರ್ಯಕರ್ತರು, ಪ್ರಮುಖರು ಉಪಸ್ಥಿತರಿದ್ದರು.

Minister Dharmendra Pradhan visit Karkala MLA Sunil Kumar House



