N Vinay Hegde: ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ವ್ಯವಸ್ಥಾಪಕ ನಿರ್ದೇಶಕ ಎನ್. ವಿನಯ್ ಹೆಗ್ಡೆ ನಿಧನ
N Vinay Hegde: ನಿಟ್ಟೆ (NITTE) ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಹಾಗೂ ಕೆ.ಎಸ್ ಹೆಗ್ಡೆ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎನ್. ವಿನಯ್ ಹೆಗ್ಡೆ ನಿಧನರಾಗಿದ್ದಾರೆ. ಎನ್. ವಿನಯ್ ಹೆಗ್ಡೆ ಅವರಿಗೆ 86 ವರ್ಷ ಪ್ರಾಯವಾಗಿತ್ತು.
ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ನಿಟ್ಟೆ ಮೂಲದವರಾದ ವಿನಯ್ ಹೆಗ್ಡೆ ವಯೋಸಹಜ ಆರೋಗ್ಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದರು. ಇಂದು ಅವರು ಚಿಕಿತ್ಸೆ ಫಲಕಾರಿಯಾಗದೇ ಇಹಲೋಕದ ಯಾತ್ರೆ ಮುಗಿಸಿದ್ದಾರೆ.
ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ. ಎಸ್ . ಹೆಗ್ಡೆ ಅವರ ದ್ವಿತೀಯ ಪುತ್ರ ವಿನಯ್ ಹೆಗ್ಡೆ ಅವರು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಸಹೋದರ ಕೂಡ ಹೌದು. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದ್ದ ವಿನಯ್ ಹೆಗ್ಡೆ ಬಡ ರೋಗಿಗಳಿಗೆ ಆರೋಗ್ಯ ಸೇವೆ ಒದಗಿಸುವಲ್ಲಿ ಹಲವು ಮಹತ್ವದ ನಿರ್ಧಾರ ಕೈಗೊಂಡಿದ್ದರು. ಗ್ರಾಮೀಣ ಪ್ರದೇಶವಾಗಿದ್ದ ನಿಟ್ಟೆಯನ್ನು ಅಂತಾರಾಷ್ಟ್ರೀಯ ಮಟ್ಟದ ಶೈಕ್ಷಣಿಕ ಕೇಂದ್ರವಾಗಿ ಪರಿವರ್ತಿಸಿದ ಕೀರ್ತಿ ಕೂಡ ವಿನಯ್ ಹೆಗ್ಡೆ ಅವರಿಗೆ ಸಲ್ಲುತ್ತದೆ .
Also Read: ಮಂಚಿಕೆರೆಯಲ್ಲಿ ಕೆರೆಗೆ ಬಿದ್ದ ಹೋರಿಗೆ ಜೀವದಾನ, ಸ್ಥಳೀಯ ಯುವಕರ ಮಾನವೀಯ ಕಾರ್ಯಕ್ಕೆ ಭಾರೀ ಮೆಚ್ಚುಗೆ



