ಉಡುಪಿಗೆ ನ.28ರಂದು ಪ್ರಧಾನಿ ಮೋದಿ : ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್​ವರೆಗೆ ರೋಡ್​ ಶೋ

Modi Road Show Udupi : ಉಡುಪಿ : ನವೆಂಬರ್​ 28ರಂದು ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಆಗಮಿಸುತ್ತಿದ್ದಾರೆ. ಉಡುಪಿ ಶ್ರೀ ಕೃಷ್ಣ ಮಠದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ.

ಶುಕ್ರವಾರದಂದು ಬೆಳಗ್ಗೆ 11:40ಕ್ಕೆ ಉಡುಪಿ-ಬನ್ನಂಜಿಯ ಡಾ|ವಿ.ಎಸ್. ಆಚಾರ್ಯ ಬಸ್ ನಿಲ್ದಾಣದ ಬಳಿ ಶ್ರೀ ನಾರಾಯಣ ಗುರು ಸರ್ಕಲ್ ನಿಂದ ಪ್ರಾರಂಭಗೊಂಡು ಸಿಟಿ ಬಸ್ ನಿಲ್ದಾಣ ಮಾರ್ಗವಾಗಿ ಕಲ್ಸಂಕ ಜಂಕ್ಷನ್ ವರೆಗೆ ಪ್ರಧಾನಿ ಮೋದಿ ರೋಡ್​ ಶೋ ಸಾಗಲಿದೆ.

ಕಲ್ಸಂಕ ರಸ್ತೆಯಿಂದ ಪಾರ್ಕಿಂಗ್ ಏರಿಯಾ-ರಥಬೀದಿ ಮೂಲಕ ಮಧ್ಯಾಹ್ನ 12.00ಕ್ಕೆ ಶ್ರೀ ಕೃಷ್ಣ ಮಠವನ್ನು ತಲುಪಿ, ಶ್ರೀ ಕೃಷ್ಣ ದರ್ಶನ ಪಡೆಯಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಈ ವಿಚಾರವಾಗಿ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ನವೀನ್​ ಶೆಟ್ಟಿ, ಪ್ರಧಾನಿ ನರೇಂದ್ರ ಮೋದಿ ಅವರು ಲಕ್ಷಕಂಠ ಗೀತಾ ಪಾರಾಯಣದಲ್ಲಿ ಭಾಗವಹಿಸಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ. 1.35ಕ್ಕೆ ಸಮಾರಂಭದಿಂದ ನಿರ್ಗಮಿಸಲಿದ್ದಾರೆ.

1.40ಕ್ಕೆ ಆದಿ ಉಡುಪಿ ಹೆಲಿಪ್ಯಾಡ್ ತಲುಪಿ 1.45ಕ್ಕೆ ಎಂಐ -17 ಹೆಲಿಕಾಪ್ಟರ್ ಮೂಲಕ ಮಂಗಳೂರಿಗೆ ತೆರಳಿ, ಮಧ್ಯಾಹ್ನ 2.15ಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ವಿಮಾನದಲ್ಲಿ ಗೋವಾಕ್ಕೆ ತೆರಳಲಿದ್ದಾರೆ ಎಂದು ಮಾಹಿತಿ ನೀಡಿದ್ರು.

ಇನ್ನು ಪ್ರಧಾನಿ ಮೋದಿ ಆಗಮನ ಹಿನ್ನೆಲೆಯಲ್ಲಿ ಉಡುಪಿಯ ಹಲವು ಕಡೆಗಳಲ್ಲಿ ಮಾರ್ಗ ಬದಲಾವಣೆ ಹಾಗೂ ಸಂಚಾರ ನಿರ್ಬಂಧಿಸಲಾಗಿದೆ. ಸಾರ್ವಜನಿಕರ ಹಿತದೃಷ್ಠಿ ಹಾಗೂ ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಉಡುಪಿ ನಗರ, ಮಲ್ಪೆ ಹಾಗೂ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಶಾಲೆಗಳಿಗೆ ಒಂದು ದಿನದ ರಜೆ ಘೋಷಿಸಲಾಗಿದೆ.

Modi Road Show Udupi : PM Narendra Modi Visit Udupi on 28th November Bannanje to Kalsanka Junction ​Road show

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories