Pramod Madhwaraj : ಮಲ್ಪೆ ಬಂದರಿನಲ್ಲಿ ಮಹಿಳೆಗೆ ಹಲ್ಲೆ ಪ್ರಕರಣ : ಪ್ರಮೋದ್‌ ಮಧ್ವರಾಜ್‌ಗೆ ಬಿಗ್‌ ರಿಲೀಫ್‌

ಕರ್ನಾಟಕ ಹೈಕೋರ್ಟ್‌ ಪ್ರಮೋದ್‌ ಮಧ್ವರಾಜ್‌ ಅವರು ನೀಡಿರುವ ಹೇಳಿಕೆಯಲ್ಲಿ ಪೊಲೀಸರು ಗಲಭೆ ಸೃಷ್ಟಿಸಲು ಪ್ರಚೋದನೆ ನೀಡಿದ ಅಂಶಗಳಿಲ್ಲ ಎಂದು ಅಭಿಪ್ರಾಯಪಟ್ಟಿದೆ. ಇದೇ ಹಿನ್ನೆಲೆಯಲ್ಲಿ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ ಅನ್ನು ರದ್ದು ಪಡಿಸಿದೆ.

ಮಲ್ಪೆ : ಮಲ್ಪೆಯ ಬಂದರಿನಲ್ಲಿ ಮೀನು ಕಳ್ಳತನ ಮಾಡಿ ಸಿಕ್ಕಿಬಿದ್ದಿದ್ದ ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಅವರಿಗೆ ಹೈಕೋರ್ಟ್‌ ಬಿಗ್‌ ರಿಲೀಫ್‌ ಕೊಟ್ಟಿದೆ. ಮಹಿಳೆಯ ಮೇಲೆ ನಡೆದಿದ್ದ ಹಲ್ಲೆ ಪ್ರಕರಣವನ್ನು ಪ್ರಮೋದ್‌ ಮಧ್ವರಾಜ್‌ ಅವರು ಸಮರ್ಥಿಸಿಕೊಂಡಿದ್ದರು. ಈ ಕುರಿತು ಮಲ್ಪೆ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನೇ ಹೈಕೋರ್ಟ್‌ ರದ್ದು ಪಡಿಸಿದೆ.

ಮಲ್ಪೆ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮೋದ್‌ ಮಧ್ವರಾಜ್‌ ಅವರು, ತಮ್ಮ ವಿರುದ್ದ ದಾಖಲಾಗಿರುವ ಎಫ್ ಐಆರ್‌ ಹಾಗೂ ವಿಚಾರಣಾ ನ್ಯಾಯಾಲಯದ ವಿಚಾರಣೆ ರದ್ದುಪಡಿಸುವಂತೆ ಕೋರಿ ಪ್ರಮೋದ್ ಮಧ್ವರಾಜ್‌ ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ.

Also Read : ಮಣಿಪಾಲ : ರೋಟರಿ ಕ್ಲಬ್ ಕೋಟ ಬ್ರಿಗೆಡ್‌ಗೆ ಚಾರ್ಟರ್‌ ಹಸ್ತಾಂತರ

ಕರ್ನಾಟಕ ಹೈಕೋರ್ಟ್‌ ಪ್ರಮೋದ್‌ ಮಧ್ವರಾಜ್‌ ಅವರು ನೀಡಿರುವ ಹೇಳಿಕೆಯಲ್ಲಿ ಪೊಲೀಸರು ಗಲಭೆ ಸೃಷ್ಟಿಸಲು ಪ್ರಚೋದನೆ ನೀಡಿದ ಅಂಶಗಳಿಲ್ಲ ಎಂದು ಅಭಿಪ್ರಾಯಪಟ್ಟಿದೆ. ಇದೇ ಹಿನ್ನೆಲೆಯಲ್ಲಿ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ ಅನ್ನು ರದ್ದು ಪಡಿಸಿದೆ.

2025ರ ಮಾ. 18ರಂದು ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿದ್ದ ಮಹಿಳೆಯನ್ನು ಕೆಲವರು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ್ದರು. ಈ ಸಂಬಂಧ ಮಲ್ಪೆ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪೊಲೀಸರು ಐವರು ಮೀನುಗಾರರನ್ಬು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.

Also Read  Amruth Shenoy : ಚೆಕ್‌ ಬೌನ್ಸ್‌ ಹಾಗೂ ಗ್ರಾಹಕ ಆಯೋಗದ ಆದೇಶ ಉಲ್ಲಂಘನೆ: ಅಮೃತ್‌ ಶೆಣೈಗೆ 3 ವರ್ಷ ಜೈಲು

ಇವರಲ್ಲಿ ಮೀನುಗಾರ ಮಹಿಳೆಯರು ಸೇರಿದ್ದರು .ಈ ಪ್ರಕರಣವನ್ನು ಶಾಂತಿಯುತವಾಗಿ ಬಗೆಹರಿಸಲು ಮಲ್ಪೆ ಮೀನುಗಾರರ ಸಂಘ ಸೇರಿದಂತೆ ಇನ್ನಿತರ ಪ್ರಮುಖ ಮೀನುಗಾರಿಕಾ ಸಂಘಗಳು ಮಲ್ಪೆಯ ಬಂದರಿನಲ್ಲಿ ಸಭೆ ಆಯೋಜಿಸಿತ್ತು. ಈ ಸಭೆಯಲ್ಲಿ ಅವರು ಮಾಡಿದ ಭಾಷಣದ ಮೇಲೆ ಕೇಸು ದಾಖಲಾಗಿತ್ತು

Pramod Madhwaraj Big Relief Karnataka High Court

Exit mobile version