ಉಡುಪಿ : 10 ಮಂದಿ ಬಾಂಗ್ಲಾ ಅಕ್ರಮ ವಲಸಿಗರಿಗೆ 2 ವರ್ಷ ಶಿಕ್ಷೆ

Udupi Bangladeshi immigrants : ಉಡುಪಿ : ಉಡುಪಿಯಲ್ಲಿ ಪತ್ತೆಯಾಗಿದ್ದ ಬಾಂಗ್ಲಾದೇಶದ 10 ಮಂದಿ ಅಕ್ರಮ ವಲಸಿಗರಿಗೆ ಉಡುಪಿಯ ಪ್ರಥಮ ದರ್ಜೆ ಹಿರಿಯ ಸಿವಿಲ್ ನ್ಯಾಯಾಧೀಶರು ಗೂ ಸಿಜೆಎಂ ನ್ಯಾಯಾಲಯವು 2 ವರ್ಷಗಳ ಜೈಲು ಶಿಕ್ಷೆಯ ಜೊತೆಗೆ ತಲಾ 10,000 ದಂಡ ವಿಧಿಸಿ ತೀರ್ಪು ನೀಡಿದೆ.
2024ರ ಅಕ್ಟೋಬರ್ 11 ರಂದು ಮಲ್ಪೆ ಪೊಲೀಸರು ರೌಂಡ್ಸ್ ನಲ್ಲಿ ಇರುವಾಗ ಸಂಜೆ 7 ಗಂಟೆ ಸುಮಾರಿಗೆ ಮಲ್ಪೆ ವಡಭಾಂಡೇಶ್ವರ ಬಸ್ ನಿಲ್ದಾಣದ ಬಳಿ 7 ಮಂದಿ ಅನುಮಾನಾಸ್ಪದವಾಗಿ ಲಗೇಜ್ ಸಮೇತ ತಿರುಗಾಡುತ್ತಿದ್ದರು.
ಕೂಡಲೇ ಪೊಲೀಸರು ಅನುಮಾನಾಸ್ಪದ ವ್ಯಕ್ತಿಗಳನ್ನು ವಿಚಾರಣೆ ನಡೆಸಿದ್ದಾರೆ. ಈ ವೇಳೆಯಲ್ಲಿ ಅವರು ಅಕ್ರಮದಲ್ಲಿ ಭಾರತದಲ್ಲಿ ನೆಲೆಸಿರುವುದು ಪತ್ತೆಯಾಗಿದೆ. ಅಷ್ಟೇ ಅಲ್ಲದೇ ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿಕೊಂಡು, ಸುಳ್ಳು ಮಾಹಿತಿಯನ್ನು ನೀಡಿ ವಂಚನೆ ಮಾಡಲು ಯತ್ನಿಸಿರುವುದು ಪತ್ತೆಯಾಗಿತ್ತು.
10 ಮಂದಿ ಕೂಡ ಬಾಂಗ್ಲಾದೇಶದಿಂದ ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿರುವುದು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಹಕೀಮ್ ಆಲಿ, ಸುಜೋನ್ ಎಸ್.ಕೆ @ ಫಾರೂಕ್, ಇಸ್ಮಾಯಿಲ್ ಎಸ್.ಕೆ @ ಮಹಮದ್ ಇಸ್ಮಾಯಿಲ್ ಹಾಕ್, ಕರೀಮ್ ಎಸ್.ಕೆ @ ಅಬ್ದುಲ್ ಕರೀಮ್, ಸಲಾಂ ಎಸ್.ಕೆ @ ಎಮ್ಡಿ ಅಬ್ದುಲ್ ಅಜೀಜ್, ರಾಜಿಕುಲ್ ಎಸ್.ಕೆ, ಮೊಹಮ್ಮದ್ ಸೋಜಿಬ್ @ ಎಮ್ಡಿ ಅಲ್ಲಾಂ ಆಲಿ, ರಿಮೂಲ್ @ ಅಬ್ದುಲ್ ರೆಹಮಾನ್, ಮೊಹಮ್ಮದ್ ಇಮಾಮ್ ಶೇಖ್ ಮತ್ತು ಮೊಹಮ್ಮದ್ ಜಹಾಂಗಿರ್ ಆಲಂ ಅವರನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ಇದನ್ನೂ ಓದಿ : ಉಡುಪಿ : ಕುಡಿದ ಮತ್ತಲ್ಲಿ ಟ್ಯಾಂಕರ್ ಚಾಲನೆ, ತಪ್ಪಿತು ಬಾರೀ ದುರಂತ
ಪೊಲೀಸರು 10 ಮಂದಿಯ ವಿರುದ್ಧ ದೋಷಾರೋಪಣ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಈ ಕುರಿತು ವಿಚಾರಣೆಯನ್ನು ನಡೆಸಿದ ನ್ಯಾಯಾಲಯವು ಪ್ರತೀ ಆರೋಪಿಗೆ ತಲಾ 2 ವರ್ಷಗಳ ಜೈಲು ಶಿಕ್ಷೆ, ತಲಾ 10,000 ರೂಪಾಯಿ ದಂಡ ವಿಧಿಸಿದೆ. ಈ ಪ್ರಕರಣದಲ್ಲಿ ಮಲ್ಪೆ ಪೊಲೀಸ್ ತಂಡದ ಕಾರ್ಯಾಚರಣೆಗೆ ಜಿಲ್ಲೆಯಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ.
Udupi 10 Bangladeshi illegal immigrants sentenced to 2 years in prison



