ಉಡುಪಿ : ಬಂಗುಡೆ ಮೀನು ಹಿಡಿದು ಬಿಗ್‌ಬಾಸ್‌ ಖ್ಯಾತಿಯ ರಕ್ಷಿತಾ ಶೆಟ್ಟಿ ಸಂಭ್ರಮ, ಹುಟ್ಟೂರಲ್ಲಿ ಅದ್ದೂರಿ ಸ್ವಾಗತ

Bigg Boss Kannada Rakshitha Shetty ಉಡುಪಿ : ಕನ್ನಡದ ಖ್ಯಾತ ಬಿಗ್‌ಬಾಸ್‌ ರಿಯಾಲಿಟಿ ಶೋನಲ್ಲಿ ರನ್ನರ್‌ ಅಪ್‌ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿರುವ ರಕ್ಷಿತಾ ಶೆಟ್ಟಿ ತನ್ನ ಹುಟ್ಟೂರಾಗಿರುವ ಉಡುಪಿಗೆ ಆಗಮಿಸಿದ್ದರು. ಈ ವೇಳೆಯಲ್ಲಿ ಕರಾವಳಿಗರು ಬಂಗುಡೆ ಮೀನು ನೀಡಿ ಸ್ವಾಗತಿಸಿದ್ರು.

ಕರಾವಳಿಯ ಕುವರಿ ರಕ್ಷಿತಾ ಶೆಟ್ಟಿ ಬಿಗ್‌ಬಾಸ್‌ ರನ್ನರ್‌ ಅಪ್‌ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಉಡುಪಿ ಜಿಲ್ಲೆಯ ಪಡುಬಿದ್ರಿ ಮೂಲದವರಾಗಿರುವ ರಕ್ಷಿತಾ ಶೆಟ್ಟಿ ಇಂದು ತನ್ನ ಹುಟ್ಟೂರಿಗೆ ಆಗಮಿಸಿದ್ದರು. ಕಾಪು ತಾಲೂಕಿನ ಹೆಜಮಾಡಿ ಬಳಿಯಲ್ಲಿ ರಕ್ಷಿತಾ ಶೆಟ್ಟಿಗೆ ಅದ್ದೂರಿ ಸ್ವಾಗತ ಕೋರಲಾಯಿತು.

ಹೆಜಮಾಡಿಯಿಂದ ಪಡುಬಿದ್ರಿಯ ವರೆಗೆ ರಕ್ಷಿತಾ ಶೆಟ್ಟಿ ಅವರನ್ನು ಅದ್ದೂರಿ ಮೆರವಣಿಗೆಯಲ್ಲಿ ಕರೆತರಲಾಯ್ತು. ಸಾವಿರಾರು ಸಂಖ್ಯೆಯಲ್ಲಿ ಜನರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಮೆರವಣಿಗೆಯ ವೇಳೆಯಲ್ಲಿ ರಕ್ಷಿತಾ ಶೆಟ್ಟಿ ಅವರು ಬಂಗುಡೆ ಮೀನನ್ನು ಕೈಯಲ್ಲಿ ಹಿಡಿದು ಸಂಭ್ರಮಿಸಿದ್ರು.

Also Read : ಬಿಗ್​ಬಾಸ್​ ಕನ್ನಡ ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಕರಾವಳಿ ಬೆಡಗಿ ರಕ್ಷಿತಾ ಶೆಟ್ಟಿ

ತನಗೆ ಬಂಗುಡೆ ಮೀನು ಅಂದ್ರೆ ಬಹಳ ಇಷ್ಟ ಅಂತಾನೂ ರಕ್ಷಿತಾ ಶೆಟ್ಟಿ ಹೇಳಿಕೊಂಡಿದ್ದಾರೆ. ರಕ್ಷಿತಾ ಶೆಟ್ಟಿ ಮೂಲತಃ ಉಡುಪಿ ಜಿಲ್ಲೆಯ ಪಡುಬಿದ್ರಿ ಅವರಾಗಿದ್ದರೂ ಕೂಡ ಅವರ ತಂದೆ, ತಾಯಿ ಮುಂಬೈನಲ್ಲಿ ನೆಲೆಸಿದ್ದಾರೆ. ಸೋಶಿಯಲ್‌ ಮೀಡಿಯಾದ ವಿಡಿಯೋಗಳ ಮೂಲಕವೇ ಪ್ರಸಿದ್ದಿ ಪಡೆದಿರುವ ರಕ್ಷಿತಾ ಈ ಬಾರಿಯ ಬಿಗ್‌ಬಾಸ್‌ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

Also Read : ಗಿಲ್ಲಿಗೆ ಪ್ರೀತಿಯಿಂದ 10 ಲಕ್ಷ ಬಹುಮಾನ ಘೋಷಿಸಿದ ಸುದೀಪ್, ಹಳ್ಳಿ ಪ್ರತಿಭೆ ಬೆಳೆಯಬೇಕು ಎಂದ ಕಿಚ್ಚ!

Udupi Bigg Boss Kannada Fame Rakshitha Shetty Celebrates Catching fish Grand Welcome in Hometown

Ashwath Acharya | ಅಶ್ವಥ್ ಆಚಾರ್ಯ

ನ್ಯೂಸ್‌ ನೆಕ್ಸ್ಟ್‌ನ ಹಿರಿಯ ವರದಿಗಾರರಾಗಿರುವ ಅಶ್ವಥ್‌ ಆಚಾರ್ಯ ಅವರು ಪತ್ರಕರ್ತರಾಗಿ ಸುಮಾರು 20 ವರ್ಷಗಳ ಅನುಭವ ಹೊಂದಿದ್ದಾರೆ. ಕರ್ನಾಟಕದ ಪ್ರಖ್ಯಾತ ಸುದ್ದಿವಾಹಿನಿ, ಕನ್ನಡ ಪ್ರತಿಷ್ಠಿತ ದಿನ ಪತ್ರಿಕೆಗಳಲ್ಲಿ ಹಾಗೂ ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. More »

Related Stories