Udupi bus Fire : ಉಡುಪಿ : ಅಗ್ನಿ ಅವಘಡ, ಸುಟ್ಟು ಕರಕಲಾಯ್ತು ಖಾಸಗಿ ಶಾಲಾ ಬಸ್

Udupi bus Fire : ಉಡುಪಿ : ಒಣಹುಲ್ಲಿನ ಕುರುಚಲು ಪೊದೆಗೆ ಇಟ್ಟ ಬೆಂಕಿ ನಿಯಂತ್ರಣ ತಪ್ಪಿ ಖಾಸಗಿ ಶಾಲಾ ಬಸ್‌ಗೆ ತಲುಗಿದೆ. ಇದರಿಂದಾಗಿ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಸೋಮವಾರ ಸಂಜೆ ನಡೆದಿದೆ..
ಉಡುಪಿಯ ಅಲೆವೂರು ಪ್ರಗತಿ ನಗರದಲ್ಲಿ ಈ ಘಟನೆ ನಡೆದಿದೆ. ಕೇಂದ್ರೀಯ ವಿದ್ಯಾಲಯದ ಸಮೀಪದಲ್ಲಿ ಯಾರೋ ಒಣ ಹುಲ್ಲಿಗೆ ಬೆಂಕಿ ಹಚ್ಚಿದ್ದರು. ಗಾಳಿಯ ವೇಗದಿಂದಾಗಿ ಬೆಂಕಿ ಸುತ್ತಮುತ್ತಲಿನ ಪ್ರದೇಶಕ್ಕೆ ವ್ಯಾಪಕವಾಗಿ ಹರಡಿದೆ.
ಹುಲ್ಲಿನ ಪಕ್ಕದಲ್ಲಿ ನಿಲ್ಲಿಸಿದ್ದ ಶಾಲಾ ಮಕ್ಕಳ ಖಾಸಗಿ ಬಸ್ ಬೆಂಕಿಗೆ ಆಹುತಿಯಾಗಿ ಸಂಪೂರ್ಣ ಕರಕಲಾಗಿದೆ. ಘಟನೆಯನ್ನು ಗಮನಿಸಿದ ಸ್ಥಳೀಯರು ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಅಗ್ನಿಶಾಮಕ ಸಿಬ್ಬಂದಿ ತ್ವರಿತವಾಗಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ಕೈಗೊಂಡಿದ್ದಾರೆ.
ಅದೃಷ್ಟವಶಾತ್, ಮಕ್ಕಳು ಮನೆಗೆ ತೆರಳಿಸಿದ ನಂತರ ಬಸ್ ಅಲ್ಲಿ ನಿಲ್ಲಿಸಲಾಗಿದ್ದು, ಬಸ್ಸಿನೊಳಗೆ ಯಾರೂ ಇಲ್ಲದ ಕಾರಣ ದೊಡ್ಡ ಅನಾಹುತ ತಪ್ಪಿದೆ. ಸ್ಥಳದಲ್ಲಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಪರಿಶೀಲನೆ ನಡೆಸುತ್ತಿದ್ದಾರೆ.
Udupi Fire accident private School bus Burn



