ಉಡುಪಿ : ಖ್ಯಾತ ಕಿರುತೆರೆ ನಟ ಎಸ್.ಎನ್. ಸೇತುರಾಮ್‌ಗೆ ಶಾರದಾ ಕೃಷ್ಣ ಪ್ರಶಸ್ತಿ -2026

Actor SN Sethuram : ಉಡುಪಿ : ಹೆಬ್ರಿ ಶ್ರೀ ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್ (ರಿ)ನ ಪ್ರಾಯೋಜಕತ್ವದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಇವರು ನೀಡುವ ಶಾರದಾ ಕೃಷ್ಣ ಪ್ರಶಸ್ತಿ 2026ಕ್ಕೆ ಖ್ಯಾತ ಕಿರುತೆರೆ ನಟ, ಖ್ಯಾತ ರಂಗ ನಿರ್ದೇಶಕರಾದ ಎಸ್ಎಸ್‌ ಸೇತುರಾಮ್‌ ಅವರು ಆಯ್ಕೆಯಾಗಿದ್ದಾರೆ.

ಜನವರಿ 2026ಕ್ಕೆ ನಡೆಯುವ ಸಂಸ್ಕೃತಿ ಉತ್ಸವದಲ್ಲಿ ಶಾರದಾ ಕೃಷ್ಣ ಪ್ರಶಸ್ತಿಯನ್ನು ಪ್ರದಾನಿಸಲಾಗುತ್ತದೆ. ಪ್ರಶಸ್ತಿ ಪತ್ರದ ಜೊತೆಗೆ ಫಲಕ ಹಾಗೂ 50000 ರೂಪಾಯಿ ನಗದು ನೀಡಿ ಗೌರವಿಸಲಾಗುತ್ತದೆ.

ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕರಾದ ರವಿರಾಜ್‌ ಎಚ್‌.ಪಿ. ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕರಾದ ವಿಶ್ವನಾಥ್ ಶೆಣೈ, ಅಧ್ಯಕ್ಷ ಪ್ರೊ.ಶಂಕರ್ ಉಪಾಧ್ಯಕ್ಷರಾದ ಡಾ. ಭಾರ್ಗವಿ ಐತಾಳ್ , ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್ ಸದಸ್ಯರಾದ ವಾಸುದೇವ ಅಡಿಗ ಉಪಸ್ಥಿತರಿದ್ದರು.

Udupi Famous Small Screen Actor SN Sethuram Honored with Sharada Krishna Award 2026

Ashwath Acharya | ಅಶ್ವಥ್ ಆಚಾರ್ಯ

ನ್ಯೂಸ್‌ ನೆಕ್ಸ್ಟ್‌ನ ಹಿರಿಯ ವರದಿಗಾರರಾಗಿರುವ ಅಶ್ವಥ್‌ ಆಚಾರ್ಯ ಅವರು ಪತ್ರಕರ್ತರಾಗಿ ಸುಮಾರು 20 ವರ್ಷಗಳ ಅನುಭವ ಹೊಂದಿದ್ದಾರೆ. ಕರ್ನಾಟಕದ ಪ್ರಖ್ಯಾತ ಸುದ್ದಿವಾಹಿನಿ, ಕನ್ನಡ ಪ್ರತಿಷ್ಠಿತ ದಿನ ಪತ್ರಿಕೆಗಳಲ್ಲಿ ಹಾಗೂ ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. More »

Related Stories