ರಸ್ತೆ ಗುಂಡಿ ಮುಚ್ಚಲು ಅನುದಾನ ಕೊಡಿ : ಸಚಿವೆ ಹೆಬ್ಬಾಳ್ಕರ್‌ಗೆ ಸುನಿಲ್‌ ಕುಮಾರ್‌ ಮನವಿ

ಉಡುಪಿ : ಮಳೆಯ ಕಾರಣದಿಂದಾಗಿ ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು (Udupi potholes) ಮುಚ್ಚಲು ಸರಕಾರದಿಂದ ಶೀಘ್ರವಾಗಿ ಅನುದಾನ ಬಿಡುಗಡೆಗೊಳಿಸುವಂತೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ಕಾರ್ಕಳ ಶಾಸಕರಾದ ವಿ.ಸುನಿಲ್‌ ಕುಮಾರ್‌ ಮನವಿ ಮಾಡಿಕೊಂಡಿದ್ದಾರೆ.

ಕಾರ್ಕಳ ತಾಲೂಕಿನ ನೀರೆ ಪಂಚಾಯತ್ ನಲ್ಲಿ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಆಧ್ಯಕ್ಷತೆ ವಹಿಸಿ ಮಾತನಾಡಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ರಸ್ತೆ ಬಾರೀ ಪ್ರಮಾಣದಲ್ಲಿ ಹಾನಿಗೆ ಒಳಗಾಗಿದೆ.

ಇದರಿಂದಾಗಿ ಹೊಂಡಾಗುಂಡಿ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತೊಡಕಾಗುತ್ತಿದೆ. ರಸ್ತೆಗುಂಡಿಗಳು ವಾಹನ ಅಪಘಾತಕ್ಕೂ ಕಾರಣವಾಗುತ್ತಿದೆ. ಹೀಗಾಗಿ ಶೀಘ್ರದಲ್ಲಿಯೇ ಅನುದಾನ ಬಿಡುಗಡೆ ಆಗಬೇಕು ಎಂದಿದ್ದಾರೆ.

Udupi Give grant for closing potholes Sunil Kumar appeals to Minister Lakshmi Hebbalkar 1

ಕಳೆದ 2 ವರ್ಷಗಳಿಂದ ಯಾವುದೇ ಅಭಿವೃದ್ದಿ ಕಾರ್ಯಗಳೊಗೂ ಸರಕಾರ ಅನುದಾನ ಬಿಡುಗಡೆ ಮಾಡುತ್ತಿಲ್ಲ. ಹೊಸ ರಸ್ತೆ ನಿರ್ಮಾಣಕ್ಕೆ ಅನುದಾನ ನೀಡದೇ ಇದ್ದರೂ ಕೂಡ, ರಸ್ತೆಯ ಗುಂಡಿಗಳನ್ನು ಮುಚ್ಚಿಸಲು ಅನುದಾನ ಮಂಜೂರು ಮಾಡಿ ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಉಡುಪಿ ಚಿನ್ನಾಭರಣ ಅಂಗಡಿಗೆ ಕನ್ನ, 95 ಲಕ್ಷ ಮೌಲ್ಯ ಚಿನ್ನ,, ಬೆಳ್ಳಿ ಕಳವು

ಕರಾವಳಿ ಭಾಗದ ಜನರು 9/11 ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಸರಕಾರದ ಗಮನ ಸೆಳೆಯಬೇಕು ಎಂದು ಸಚಿವರಿಗೆ ಮನವಿ ಮಾಡಿದ್ದಾರೆ.

ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಕೆಂಪು ಕಲ್ಲು ಹಾಗೂ ಮರಳಿನ ಕೊರತೆಯಿಂದಾಗಿ ಆರ್ಥಿಕ ಚಟುವಟಿಕೆ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಲಾರಿ ಮಾಲೀಕರು ಲಾರಿಗಳನ್ನು ಹರಾಜಿಗೆ ಇಡುವ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಹೀಗಾಗಿ ಕಂಪು ಕಲ್ಲು ಹಾಗೂ ಮರಳಿಗೆ ರಾಜ್ಯ ಸರಕಾರ ಕಾನೂನಿನಲ್ಲಿ ನಿಯಮವನ್ನು ಸರಳೀಕರಣಗೊಳಿಸಬೇಕು ಎಂದಿದ್ದಾರೆ.

Udupi Give grant for closing potholes: Sunil Kumar appeals to Minister Lakshmi Hebbalkar

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories