ಉಡುಪಿ : ಜಿಲೈ 26 ರಂದು ಬಿರುಗಾಳಿ ಸಹಿತ ಮಳೆ, ರೆಡ್ ಅಲರ್ಟ್ ಘೋಷಣೆ

Udupi Red Alert : ಉಡುಪಿ : ಭಾರತೀಯ ಹವಾಮಾನ ಇಲಾಖೆ ಉಡುಪಿ ಜಿಲ್ಲೆಯಾದ್ಯಂತ ಜುಲೈ 26 ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಬಿರುಗಾಳಿ ಮಳೆ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಕರಾವಳಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದಲೂ ನಿರಂತರವಾಗಿ ಮಳೆ ಸುರಿಯುತ್ತಿದೆ. ಧಾರಾಕಾರ ಮಳೆಯಿಂದ ಜಿಲ್ಲೆಯ ನದಿಗಳು ತುಂಬಿ ಹರಿಯುತ್ತಿವೆ. ಅದ್ರಲ್ಲೂ ಇಂದು ಜಿಲ್ಲೆಯಾದ್ಯಂತ ಅತ್ಯಧಿಕ ಪ್ರಮಾಣದಲ್ಲಿ ಮಳೆ ಸುರಿಯಲಿದೆ.
ಭಾರತೀಯ ಹವಾಮಾನ ಇಲಾಖೆ (IMD) ಜುಲೈ 26 ರವರೆಗೆ ಕರಾವಳಿ ಕರ್ನಾಟಕಕ್ಕೆ ರೆಡ್ ಅಲರ್ಟ್ ನೀಡಿದ್ದು, ಅತಿ ಹೆಚ್ಚು ಮಳೆಯ ಜೊತೆಗೆ ಬಿರುಗಾಳಿ ಸಹಿತ ಗಾಳಿಯ ಮುನ್ಸೂಚನೆ ಇದೆ.
ಜುಲೈ 27ರ ವರೆಗೂ ಕರಾವಳಿ ಭಾಗದಲ್ಲಿ ಮಳೆಯ ಆರ್ಭಟ ಜೋರಾಗಿ ಇರಲಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ 27 ರಿಂದ 30ರ ವರೆಗೆ ಆರೆಂಜ್ ಅಲರ್ಟ್ ಘೋಷಿಸಿದೆ.
Udupi Red Alert : ಉಡುಪಿ ಜಿಲ್ಲೆಯಲ್ಲಿ ಪ್ರವಾಹ ಭೀತಿ
ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಸುರಿಯುತ್ತಿದೆ. ಅಲ್ಲದೇ ಜಿಲ್ಲೆಯಲ್ಲಿ ಇನ್ನೂ ಎರಡು ದಿನಗಳ ಕಾಲ ಧಾರಾಕಾರ ಮಳೆ ಸುರಿಯಲಿದೆ.
ನದಿ ಪಾತ್ರದಲ್ಲಿರುವ ಅನೇಕ ಗ್ರಾಮಗಳಿಗೆ ಮತ್ತು ತಗ್ಗು ಪ್ರದೇಶಗಳಿಗೆ ಪ್ರವಾಹದ ಅಪಾಯ ಎದುರಾಗಿದೆ. ಉಡುಪಿ ನಗರ, ಕುಂದಾಪುರ, ಬ್ರಹ್ಮಾವರ, ಹೆಬ್ರಿ, ಕಾಪು, ಕಾರ್ಕಳ, ಬೈಂದೂರಿನ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ.
ಭಾರತೀಯ ಹವಾಮಾನ ಇಲಾಖೆ (IMD) ಉಡುಪಿ ಜಿಲ್ಲೆಗೆ “ಅತ್ಯಂತ ಹೆಚ್ಚು ಮಳೆ” (Extremely Heavy Rain) ಮತ್ತು “ಭಾರೀ ಮಳೆ” (Very Heavy Rain) ಮುನ್ಸೂಚನೆಯನ್ನು ನೀಡಿದೆ.
ಮಳೆಯಿಂದ ನದಿಗಳಲ್ಲಿನ ನೀರಿನ ಮಟ್ಟ ಮತ್ತಷ್ಟು ಏರಿ ಪ್ರವಾಹ ಪರಿಸ್ಥಿತಿ ಉಲ್ಬಣಗೊಳ್ಳುವ ಸಾಧ್ಯತೆ ಇದೆ.
ಸಮುದ್ರದಲ್ಲಿ ಎತ್ತರದ ಅಲೆಗಳು
ಜುಲೈ 25 ರಿಂದ ಜುಲೈ 27 ರವರೆಗೆ ಅರಬ್ಬಿ ಸಮುದ್ರದಲ್ಲಿ 3.7 ರಿಂದ 3.8 ಮೀಟರ್ ಎತ್ತರದ ಅಲೆಗಳು ಏಳುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಲಾಗಿದೆ.
ಇದು ಕರಾವಳಿ ಪ್ರದೇಶಗಳಲ್ಲಿ ಪ್ರವಾಹದ ಸ್ಥಿತಿಯನ್ನು ಇನ್ನಷ್ಟು ಹೆಚ್ಚಿಸಿದ್ದು, ಸಮುದ್ರ ತೀರದಲ್ಲಿ ಕಡಲ ಕೊರತ ಉಂಟಾಗುವ ಸಾಧ್ಯತೆಯಿದೆ.
Udupi Heavy rain with thunderstorm on July 26 red alert declared in Kannada News



