ಕೋಡಿ ಬೆಂಗ್ರೆ : ಪ್ರವಾಸಿಗರ ದೋಣಿ ಸಮುದ್ರದಲ್ಲಿ ಪಲ್ಟಿ – ಇಬ್ಬರ ಸ್ಥಿತಿ ಗಂಭೀರ

ಉಡುಪಿ : ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ದೋಣಿಯೊಂದು ಸಮುದ್ರದಲ್ಲಿ ಪಲ್ಟಿ ಆಗಿರುವ ಘಟನೆ ಉಡುಪಿ ಜಿಲ್ಲೆಯ ಕೋಡಿ ಬೆಂಗ್ರೆಯಲ್ಲಿ ನಡೆದಿದೆ. ಘಟನೆಯಲ್ಲಿ ಹಲವರು ಅಸ್ವಸ್ಥಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಕೋಡಿಬೆಂಗ್ರೆಯಲ್ಲಿರುವ ರೆಸಾರ್ಟ್‌ನಲ್ಲಿ ಉಳಿದುಕೊಂಡಿದ್ದವು ಇಂದು ಬೆಳಗ್ಗೆ ವಿಹಾರಕ್ಕೆಂದು ದೋಣಿಯಲ್ಲಿ ಸಮುದ್ರಕ್ಕೆ ಪ್ರಯಾಣಿಸಿದ್ದಾರೆ. ಈ ವೇಳೆಯಲ್ಲಿ ದೋಣಿ ಸಮುದ್ರದ ಅಲೆಗೆ ಸಿಲುಕಿ ಮುಳುಗಡೆಯಾಗಿದೆ.
ದೋಣಿಯಲ್ಲಿ ಸುಮಾರು 10 ಮಂದಿ ಪ್ರವಾಸಿಗರು ಇದ್ದು, ಅವರಲ್ಲಿ ಯಾರೂ ಲೈಫ್ ಜಾಕೆಟ್ ಧರಿಸಿರಲಿಲ್ಲ ಎಂಬುದು ತಿಳಿದುಬಂದಿದೆ.
Also Read : ನಡೂರು ಹೈಸ್ಕೂಲ್ ಸಮೀಪ ಚಿರತೆ ಸಂಚಾರ: ಗ್ರಾಮಸ್ಥರಲ್ಲಿ ಆತಂಕ
ಘಟನೆ ನಡೆಯುತ್ತಿದ್ದಂತೆಯೇ ಸ್ಥಳೀಯರ ನೆರವಿನಿಂದ ಹಲವರನ್ನು ರಕ್ಷಿಸಲಾಗಿದೆ. ಆದರೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.
ಸದ್ಯ ಘಟನಾ ಸ್ಥಳಕ್ಕೆ ಮಲ್ಪೆ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಲಾಗುತ್ತಿದೆ. ದೋಣಿ ಪಲ್ಟಿಯಾದ ಕಾರಣ ಹಾಗೂ ಸುರಕ್ಷತಾ ನಿರ್ಲಕ್ಷ್ಯದ ಕುರಿತು ತನಿಖೆ ಕೈಗೊಂಡಿದ್ದಾರೆ.
Also Read : ಸಾಸ್ತಾನ ಟೋಲ್ ಪ್ಲಾಜಾದಲ್ಲಿ ನಿವೃತ್ತ ಸೈನಿಕನಿಗೆ ಟೋಲ್ ವಿನಾಯಿತಿ ನಿರಾಕರಣೆ: ವಿಡಿಯೋ ವೈರಲ್
Udupi Kodi Bengre Wave Rider Tourist boat capsizes in the sea two in critical condition



