ಉಡುಪಿ : ನವೆಂಬರ್‌ 28ರಂದು ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ

Udupi School Holiday : ಉಡುಪಿ : ಪ್ರಧಾನಿ ನರೇಂದ್ರ ಮೋದಿ ನವೆಂಬರ್​ 28ರಂದು ಉಡುಪಿಗೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಉಡುಪಿ ನಗರ, ಮಲ್ಪೆ ಹಾಗೂ ಮಣಿಪಾಲ ವ್ಯಾಪ್ತಿಯಲ್ಲಿನ ಅಂಗನವಾಡಿ, ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ಹಾಗೂ ಶ್ರೀಮಠದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗಿಯಾಗುತ್ತಿದ್ದಾರೆ. ಪ್ರಧಾನಿ ಮೋದಿಯವರ ಜಿಲ್ಲಾ ಭೇಟಿಯ ಸಂದರ್ಭದಲ್ಲಿ ಕೇಂದ್ರದ ಸಚಿವರುಗಳು, ಮುಖ್ಯಮಂತ್ರಿಗಳು, ರಾಜ್ಯಪಾಲರು ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಬರುವ ಸಾಧ್ಯ ಇರುವುದರಿಂದ ಉಡುಪಿ ಜಿಲ್ಲಾಡಳಿತ ಸಕಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ.

ಇದನ್ನೂ ಓದಿ : ಭೀಕರ ಅಪಘಾತ : ಉಡುಪಿಯಲ್ಲಿ ಕಾರ್ಯನಿರ್ವಹಿಸಿದ್ದ ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ದುರ್ಮರಣ

ಈ ನಡುವೆ ಇದೀಗ ಪ್ರಧಾನಿ ಮೋದಿಯವರ ಭೇಟಿ ಸಂದರ್ಭದಲ್ಲಿ ಶಾಲಾ ಮಕ್ಕಳ ಸಂಚಾರಕ್ಕೆ ತೊಡಕು ಉಂಟಾಗುವ ಸಾಧ್ಯತೆ ಇರುವುದರಿಂದ ಶಾಲಾ ಮಕ್ಕಳ ಸುರಕ್ಷತೆ ಮತ್ತು ಸಾರ್ವಜನಿಕರ ಹಿತದೃಷ್ಠಿಯಿಂದ ಉಡುಪಿ ನಗರ, ಮಣಿಪಾಲ ಮತ್ತು ಮಲ್ಪೆ ಠಾಣಾ ವ್ಯಾಪ್ತಿಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಒಂದು ದಿನದ ಮಟ್ಟಿಗೆ ರಜೆಯನ್ನು ಉಡುಪಿ ಜಿಲ್ಲಾಡಳಿತ ಘೋಷಣೆ ಮಾಡಿದೆ.

ಇದನ್ನೂ ಓದಿ : ಉಡುಪಿಗೆ ನರೇಂದ್ರ ಮೋದಿ ಭೇಟಿ ಹಿನ್ನೆಲೆ ನಗರದಲ್ಲಿ ಸಂಚಾರ ನಿರ್ಬಂಧ, ಮಾರ್ಗ ಬದಲಾವಣೆ

ಪ್ರಧಾನಿ ಮೋದಿ ಉಡುಪಿಗೆ ಆಗಮನ ಹಿನ್ನೆಲೆಯಲ್ಲಿ ನಾಳೆ ಹಲವು ಮಾರ್ಗಗಳಲ್ಲಿ ಸಂಚಾರ ಬಂದ್​ ಮಾಡಲಾಗಿದ್ದರೆ, ಇನ್ನೂ ಹಲವು ಮಾರ್ಗಗಳಲ್ಲಿ ಬದಲಾವಣೆ ಮಾಡಲಾಗಿದೆ. ಈ ಬದಲಾವಣೆಗಳಿಂದ ಶಾಲಾ ಮಕ್ಕಳಿಗೆ ಯಾವುದೇ ರೀತಿಯ ತೊಂದರೆಯಾಗಬಾರದು ಎಂಬ ಕಾರಣದಿಂದಾಗಿ ಉಡುಪಿ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.

Udupi School Holiday For PM Narendra Modi Visit Krishna Math

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories