Pawan Kalyan : ಉಡುಪಿ ಶ್ರೀ ಕೃಷ್ಣ ಮಠದ ಗೀತೋತ್ಸವ : ಸಮಾರೋಪಕ್ಕೆ ಪವನ್ ಕಲ್ಯಾಣ್

Pawan Kalyan : ಉಡುಪಿ : ಪರ್ಯಾಯ ಶ್ರೀ ಪುತ್ತಿಗೆ ಮಠದ ಹಮ್ಮಿಕೊಂಡಿರುವ ಗೀತೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭ ಡಿಸೆಂಬರ್ 7 ರಂದು ನಡೆಯಲಿದೆ. ಈ ಅದ್ದೂರಿ ಸಮಾರೋಪ ಸಮಾರಂಭದಲ್ಲಿ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ, ನಟ ಪವನ್ ಕಲ್ಯಾಣ್ ಪಾಲ್ಗೊಳ್ಳಲಿದ್ದಾರೆ.
ಡಿಸೆಂಬರ್ 7 ರಂದು ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಪವರ್ ಸ್ಟಾರ್ ಪವನ್ ಕಲ್ಯಾಣ್ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನಲಾಗುತ್ತಿದೆ.
ಗೀತೋತ್ಸವ ಕಾರ್ಯಕ್ರಮವನ್ನು ನವೆಂಬರ್ 8 ರಂದು ಪೇಜಾವರ ಶ್ರೀಗಳು ಉದ್ಘಾಟಿಸಿದ್ದರು. ಗೀತಪಾರಾಯಣದ ಪ್ರಮುಖ ಆಕರ್ಷಣೆಯಾಗಿ ನಡೆದ ಲಕ್ಷ ಕಂಠ ಗೀತಪಾರಾಯಣದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಗವಹಿಸಿದ್ದು ವಿಶೇಷವಾಗಿತ್ತು.
ನರೇಂದ್ರ ಮೋದಿ ಅವರು ಉಡುಪಿ ನಗರದಲ್ಲಿ ಮೊದಲ ಬಾರಿಗೆ ರೋಡ್ ಶೋ ನಡೆಸಿದ್ದರು. ಇದೀಗ ಸಮಾರೋಪ ಕಾರ್ಯಕ್ರಮದ ವೇದಿಕೆಗೆ ಸ್ಟಾರ್ ನಟ ಪವನ್ ಕಲ್ಯಾಣ್ ಆಗಮಿಸುತ್ತಿರುವುದು ವಿಶೇಷವಾಗಿದೆ.
Udupi Sri Krishna Matha Geethotsava Pawan Kalyan for the Valedictory Ceremony



