ವಾರಾಹಿ ಸಮಸ್ಯೆಗೆ ಶೀಘ್ರ ಪರಿಹಾರ, ಪರಶುರಾಮನ ಹೆಸರಲ್ಲಿ ರಾಜಕೀಯ ಮಾಡಲ್ಲ : ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ : ವಾರಾಹಿ ಯೋಜನೆಗೆ ಸಂಬಂಧಿಸಿದಂತೆ ಉಂಟಾಗಿರುವ ಸಮಸ್ಯೆಗಳನ್ನು ಶೀಘ್ರದಲ್ಲಿಯೇ ಪರಿಹಾರ ಮಾಡುತ್ತೇವೆ. ಅಲ್ಲದೇ ಪರಶುರಾಮ ಥೀಮ್ ಪಾರ್ಕ್ ವಿಚಾರದಲ್ಲಿ ಎಂದಿಗೂ ರಾಜಕೀಯ ಮಾಡುವುದಿಲ್ಲ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಹೇಳಿದ್ದಾರೆ.
ಕರಾವಳಿ ಭಾಗದ ಪ್ರವಾಸೋದ್ಯಮದ ಅಭಿವೃದ್ದಿಯ ನಿಟ್ಟಿನಲ್ಲಿ ಮಲ್ಪೆಯ ಸೇಂಟ್ ಮೇರಿಸ್ ಐಲ್ಯಾಂಡ್ನಲ್ಲಿ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ದ್ವಜಾರೋಹಣ ನಡೆಸಿದ್ದಾರೆ. ಮಾತನಾಡಿದ್ದಾರೆ.
ವಾರಾಹಿ ನೀರಾವರಿ ಯೋಜನೆಯ ವಿಚಾರದಲ್ಲಿ ಕಾಂಗ್ರೆಸ್ ನಾಯಕರ ನಡುವಿನ ಕಚ್ಚಾಟಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಾತನಾಡಿದ್ದಾರೆ, ವಾರಾಹಿ ಯೋಜನೆ ಜಿಲ್ಲೆಯ ಬಹುದಿನದ ಬೇಡಿಕೆ. ಇದು ರೈತರಿಗೆ ಅನುಕೂಲಕ್ಕಾಗಿ ಮಾಡಿದ ಯೋಜನೆ. ತಾಂತ್ರಿಕ ತಂಡ ಬಂದು ಹೋಗಿದೆ ಎಂದಿದ್ದಾರೆ.
Also Read : ಕೋಡಿ ಬೆಂಗ್ರೆ : ಪ್ರವಾಸಿಗರ ದೋಣಿ ಸಮುದ್ರದಲ್ಲಿ ಪಲ್ಟಿ – ಇಬ್ಬರ ಸ್ಥಿತಿ ಗಂಭೀರ
ಮುಖ್ಯಮಂತ್ರಿಗಳಿಗೆ ಉಪಮುಖ್ಯಮಂತ್ರಿಗಳಿಗೆ ಇದರ ಬಗ್ಗೆ ಮಾಹಿತಿ ಇದೆ. ತಾಂತ್ರಿಕ ತಂಡದ ಜೊತೆ ಸಭೆ ಮಾಡುತ್ತೇವೆ ಆದಷ್ಟು ಬೇಗ ಪರಿಹಾರ ಕಲ್ಪಿಸುತ್ತೇವೆ. ಆದರೆ ಹಿರಿಯ ಕಾಂಗ್ರೆಸ್ ನಾಯಕ ಪ್ರತಾಪ್ ಚಂದ್ರ ಶೆಟ್ಟಿ ಅವರ ಬಗ್ಗೆ ನಾನು ಮಾತನಾಡಲ್ಲ ಎಂದರು.
ಈಗಾಗಲೇ ವಾರಾಹಿ ಯೋಜನೆಗೆ ಸಂಬಂಧಿಸಿದಂತೆ ತಾಂತ್ರಿಕ ತಂಡ ಪರಿಶೀಲನೆ ನಡೆಸಿದೆ, ಜಿಲ್ಲಾಡಳಿತಕ್ಕೆ ಸಂಪೂರ್ಣ ಮಾಹಿತಿ ನೀಡಿದೆ. ಆದಷ್ಟು ಬೇಗ ಪರಿಹಾರ ಕಂಡುಕೊಳ್ಳುತ್ತೇವೆ. ಆದರೆ ಈ ಯೋಜನೆ ನೆನೆಗುದಿಗೆ ಬಿದ್ದಿರುವುದು ದುರ್ದೈವ. ನಮ್ಮ ಕಾಲಘಟ್ಟದಲ್ಲಿ ಖಂಡಿತವಾಗಿ ಯೋಜನೆ ಮುಗಿಸುತ್ತೇವೆ ಎಂಬ ಭರವಸೆ ನೀಡಿದ್ದಾರೆ.
ಪರಶುರಾಮ ಥೀಮ್ ಪಾರ್ಕ್ ವಿಚಾರದಲ್ಲಿ ರಾಜಕೀಯ ಮಾಡಲ್ಲ
ಕಾರ್ಕಳದಲ್ಲಿರುವ ಪರಶುರಾಮ ಥೀಂ ಪಾರ್ಕ್ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ನಿರ್ಲಕ್ಷ ಮಾಡುತ್ತಿದೆ ಎನ್ನುವ ಮಾಜಿ ಸಚಿವ ಸುನಿಲ್ ಕುಮಾರ್ ಆರೋಪಕ್ಕೆ ಸಂಬಂಧಿಸಿದಂತೆ ಹೆಬ್ಬಾಳ್ಕರ್ ಪ್ರತಿಕ್ರಿಯಿಸಿದ್ದಾರೆ.
Also Read : ಬ್ಯಾಚುಲರ್ಗಳಿಗೆ ವರದಾನ; ಕೇವಲ 10 ರೂಪಾಯಿಗೆ ಸಿಗುತ್ತೆ ನಂದಿನಿ ಹಾಲು, ಮೊಸರು
ಪರಶುರಾಮನನ್ನು ಕರಾವಳಿ ಭಾಗದ ಜನರು ಆರಾಧನೆ ಮಾಡುತ್ತಿದ್ದಾರೆ. ನಮಗೂ ಕೂಡ ಈ ವಿಚಾರದಲ್ಲಿ ರಾಜಕಾರಣ ಮಾಡುವುದು ಇಷ್ಟ ಇಲ್ಲ ಎಂದಿದ್ದಾರೆ.
Varahi Irrigation Project Quick solution no politics in the name of Parashurama Theme park Issues Lakshmi Hebbalkar



