ಮುದ್ದೂರು ವಿಎಸ್ಎಸ್ ಆಂಗ್ಲಮಾಧ್ಯಮ ಶಾಲೆ : ವಾರ್ಷಿಕ ಕ್ರೀಡಾಕೂಟ
VSS CBSE School Udupi : ಉಡುಪಿ : ರಾಜ್ಯದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾಗಿರುವ ಮುದ್ದೂರಿನ ವಿಎಸ್ಎಸ್ ಆಂಗ್ಲಮಾಧ್ಯಮ ಶಾಲೆಯ ವಾರ್ಷಿಕ ಕ್ರೀಡಾಕೂಟವು ಡಿಸೆಂಬರ್ 20ರಂದು ನೆರವೇರಿತು. ಹೆಬ್ರಿ ಪೊಲೀಸ್ ಠಾಣೆಯ ಸಬ್‌ಇನ್‌ಸ್ಪೆಕ್ಟರ್ ಆಗಿರುವ ಚಂದ್ರ ಎ.ಕೆ. ಕ್ರೀಡಾಕೂಟವನ್ನು ಉದ್ಘಾಟಿಸಿದ್ದಾರೆ.

ಗೌರವ ವಂದನೆ ಸ್ವೀಕರಿಸಿ ಮಾತನಾಡಿದ ಅವರು, ವಿಎಸ್ಎಸ್ ಉಡುಪಿ ಜಿಲ್ಲೆಯಲ್ಲಿಯೇ ಪ್ರಖ್ಯಾತಿ ಪಡೆದಿರುವ ವಿದ್ಯಾಸಂಸ್ಥೆಯಾಗಿದೆ. ಮಕ್ಕಳಿಗೆ ಇಲ್ಲಿ ಕೇವಲ ಶಿಕ್ಷಣವನ್ನು ನೀಡುತ್ತಿಲ್ಲ. ಬದಲಾಗಿ ಸಂಸ್ಕಾರಯುತ ಬದುಕನ್ನು ಕಲ್ಪಿಸಲಾಗುತ್ತಿದೆ. ಪಠ್ಯ ಚಟುವಟಿಕೆಯ ಜೊತೆಗೆ ಕ್ರೀಡಾ ಚಟುವಟಿಕೆಗೂ ಹೆಚ್ಚಿನ ಪ್ರೋತ್ಸಾಹ ನೀಡುತ್ತಿರುವುದಕ್ಕೆ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


ವಿಎಸ್ಎಸ್ ಇಎಂಎಸ್‌ನ ಅಧ್ಯಕ್ಷರಾದ ಪ್ರತಾಪ್ ಹೆಗ್ಡೆ ಮಾರಾಳಿ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸಮಾರೋಪ ಸಮಾರಂಭದಲ್ಲಿ ಸೌತ್ ಏಷಿಯಾ ಮಾಸ್ಟರ್ ಅಥ್ಲೆಟಿಕ್ಸ್ ಅಸೋಸಿಯೇಶನ್ ಅಧ್ಯಕ್ಷರಾದ ಉದಯ್ ಕುಮಾರ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.

ವಿಎಸ್ಎಸ್ ಆಡಳಿತಾಧಿಕಾರಿ ಹೆರಾಲ್ಡ್ ಲೂವಿಸ್, ದೈಹಿಕ ಶಿಕ್ಷಕಿ ಜಯಶ್ರೀ ಮುಂತಾದವರು ಉಪಸ್ಥಿತರಿದ್ದರು.

ವಿಎಸ್‌ಎಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಪ್ರಾಂಶುಪಾಲರಾದ ಭಾರತಿ ಅವರು ಸ್ವಾಗತಿಸಿದ್ರೆ, ವಿಎಸ್‌ಎಸ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಪ್ರಾಂಶುಪಾಲರಾದ ಅಮಿತಾ ಶೆಟ್ಟಿ ಅವರು ಧನ್ಯವಾದ ಸಮರ್ಪಿಸಿದರು.

ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿನಿ ಕಲ್ಯಾಣಿ ಮತ್ತು 8ನೇ ತರಗತಿ ವಿದ್ಯಾರ್ಥಿನಿ ಭಕ್ತಿ ಶೆಟ್ಟಿ ಹಾಗೂ ಸಮಾರೋಪ ಸಮಾರಂಭದಲ್ಲಿ 10ನೇ ತರಗತಿಯ ಶಮಂತ್ ಹಾಗೂ 8ನೇ ತರಗತಿಯ ಸಾನಿಧ್ಯ ಕಾರ್ಯಕ್ರಮ ನಿರೂಪಿಸಿದರು.

Udupi VSS English Medium School Muddur Annual Sports meet – VSS CBSE School Udupi



