ಬಡಾನಿಡಿಯೂರು ಏಕ ವಿನ್ಯಾಸ ಕಡತ ವಿಚಾರ : ರಘುಪತಿ ಭಟ್​ ಆರೋಪಗಳಿಗೆ ಯಶಪಾಲ್​ ಸುವರ್ಣ ತಿರುಗೇಟು

ಉಡುಪಿ : ಬಡಾನಿಡಿಯೂರು ಗ್ರಾಮದ ನಿವೇಶನ ಏಕ ವಿನ್ಯಾಸ ಕಡತ ವಿಚಾರದಲ್ಲಿ ಮಾಜಿ ಶಾಸಕ ರಘುಪತಿ ಭಟ್​​ ತನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಉಡುಪಿ ಶಾಸಕ ಯಶಪಾಲ್​ ಸುವರ್ಣ ದಾಖಲೆ ಸಮೇತ ಪ್ರತ್ಯುತ್ತರ ನೀಡಿದ್ದಾರೆ .

ಈ ಕುರಿತು ಮಾತನಾಡಿದ ಶಾಸಕ ಯಶಪಾಲ್​ ಸುವರ್ಣ, ಅಧಿಕಾರಿಗಳ ಮಾನಸಿಕ ಸ್ಥೈರ್ಯ ಕುಗ್ಗಿಸುವ ಕಾರ್ಯ ಮಾಡಲಾಗುತ್ತಿದೆ. ಅವರ ಮೇಲೆ ಒತ್ತಡ ಹೇರಬೇಕೆಂದು ಅನಗತ್ಯ ಪ್ರತಿಭಟನೆಯ ಬೆದರಿಕೆ ಹಾಕುತ್ತಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕರಾವಳಿಯ ಪ್ರವಾಸೋದ್ಯಮಕ್ಕೂ ತಟ್ಟಿದ ಎಲ್​ಪಿಜಿ ಅಭಾವ : ಪ್ರವಾಸಿಗರಿಗೆ ಭಾರೀ ನಿರಾಸೆ

ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶ್ರೀಮತಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿರುವ ಯಶಪಾಲ್​ ಸುವರ್ಣ, ಏಕ ವಿನ್ಯಾಸ ಕಡತವನ್ನು ಕಾನೂನು ಪ್ರಕಾರ ಪರಿಶೀಲಿಸಿ ವಿಲೇವಾರಿ ಮಾಡಲು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ತಕ್ಷಣ ಸೂಕ್ತ ನಿರ್ದೇಶನ ನೀಡುವಂತೆ ಮನವಿ ಮಾಡಿದ್ದಾರೆ.

Ashwath Acharya | ಅಶ್ವಥ್ ಆಚಾರ್ಯ

ನ್ಯೂಸ್‌ ನೆಕ್ಸ್ಟ್‌ನ ಹಿರಿಯ ವರದಿಗಾರರಾಗಿರುವ ಅಶ್ವಥ್‌ ಆಚಾರ್ಯ ಅವರು ಪತ್ರಕರ್ತರಾಗಿ ಸುಮಾರು 20 ವರ್ಷಗಳ ಅನುಭವ ಹೊಂದಿದ್ದಾರೆ. ಕರ್ನಾಟಕದ ಪ್ರಖ್ಯಾತ ಸುದ್ದಿವಾಹಿನಿ, ಕನ್ನಡ ಪ್ರತಿಷ್ಠಿತ ದಿನ ಪತ್ರಿಕೆಗಳಲ್ಲಿ ಹಾಗೂ ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. More »

Related Stories