Karnataka weather : ಕರಾವಳಿ ಸೇರಿ‌ ರಾಜ್ಯದ ಹಲವೆಡೆ 5 ದಿನ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : (Karnataka weather) ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಸೇರಿದಂತೆ ಅನೇಕ ಕಡೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯಿದ್ದು, ಹವಾಮಾನ ಇಲಾಖೆ ಮಳೆಯ ಮುನ್ಸೂಚನೆಯನ್ನು ನೀಡಿದೆ. ಬುಧವಾರ ಮೋಡ ಕವಿದ ವಾತಾವರಣವಿದ್ದು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲೂ ಮಳೆಯ ಸಾಧ್ಯತೆಯಿದೆ.

ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲೂ ಮಳೆಯ ಸಾಧ್ಯತೆ ಇದ್ದು, ಕರಾವಳಿ ಭಾಗದಲ್ಲಿ ತಾಪಮಾನ 2 ರಿಂದ 3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಸಮುದ್ರಗಳ ಮೇಲ್ಮೈನಲ್ಲಿ ಸುಳಿಗಾಳಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಇಂದಿನಿಂದಲೇ ರಾಜ್ಯದ ನಾನಾ ಕಡೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಗುರುವಾರದಿಂದ ಉತ್ತರ ಕನ್ನಡದ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಶುಕ್ರವಾರದಿಂದ ಬಯಲುಸೀಮೆಯ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಮಾ.14 ರಿಂದ 18 ರವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೆಲವೆಡೆ ಹಗುರ ಮಳೆ ಹಾಗೂ ಮಾ.16 ರಿಂದ 18 ರವರೆಗೆ ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬಳ್ಳಾರಿ, ಬೀದರ್‌, ಧಾರವಾಡ, ಗದಗ, ಕಲಬುರಗಿ, ವಿಜಯಪುರ ಮತ್ತು ಕೊಪ್ಪಳ ಜಿಲ್ಲೆಯ ಕೆಲವು ಕಡೆ ಮಾ.16 ರಿಂದ ಮಾ.18 ರವೆರೆಗೆ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಯಲ್ಲಿ ಮಾ.17 ಮತ್ತು 18ರಂದು ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ನಗರ ಅಥವಾ ಬೆಂದಳೂರು ಗ್ರಾಮಾಂತರದಲ್ಲಿ 16, 17 ನೇ ತಾರೀಕಿನಂದು ಹಗುರ ಮಳೆ ಅಥವಾ ಸಾಧಾರಣದಿಂದ ಗುಡುಗು ಮಿಂಚಿನಿಂದ ಕೂಡಿದ ಮಳೆಯಾಗಲಿದೆ ಎಂದು ಹವಾಮಾನ ತಜ್ಞ ಪ್ರಸಾದ್ ಹೇಳಿದ್ದಾರೆ. ಉಳಿದಂತೆ ಗರಿಷ್ಠ ಉಷ್ಣಾಂಶ 32 ಅಥವಾ ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇರುತ್ತದೆ.

ಇದನ್ನೂ ಓದಿ : ಬೆಂಗಳೂರು-ಮೈಸೂರು ಇ-ಹೈವೇಯಲ್ಲಿ ಇಂದಿನಿಂದಲೇ ಟೋಲ್‌ ಸಂಗ್ರಹ: ಭಾರೀ ವಿರೋಧದ ನಡುವೆಯೂ ಟೋಲ್‌ ಅರಂಭ

ಬೆಂಗಳೂರಿನಲ್ಲಿ ಬೆಳಗ್ಗೆ ಹಾಗೂ ಸಂಜೆಯ ಸಮಯದಲ್ಲಿ ಮೋಡಕವಿದ ವಾತಾವರಣವಿರಲಿದೆ ಎಚ್​ಎಎಲ್​ನಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬಾಗಲಕೋಟೆಯಲ್ಲಿ 13.0 ಡಿಗ್ರಿ ಸೆಲ್ಸಿಯಸ್​ ಅತಿ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 36.9 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ದೆಹಲಿಯಲ್ಲಿ ತಾಪಮಾನ ಹೆಚ್ಚಾಗುತ್ತಿದೆ, ಹಾಗೆಯೇ ಜಾರ್ಖಂಡ್​ನಲ್ಲಿ ಮಳೆಯಾಗುವ ಸಾಧ್ಯತೆ ಇದೆ.

Karnataka weather: 5 days of heavy rain likely everywhere including the coast: Meteorological department forecast

Comments are closed.