ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿದ್ದು, ಕಳೆದ ಮೂರು ದಿನಗಳ ಹಿಂದೆಯಷ್ಟೇ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಬೆನ್ನಲ್ಲೇ ಇದೀಗ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ. ಹೀಗಾಗಿ ಈ ಬಾರಿಯ ಅಧಿವೇಶನದಲ್ಲಿ ಡಿಸಿಎಂ ಭಾಗವಹಿಸುವುದು ಅನುಮಾನ.

ಸೋಮವಾರದಿಂದ ವಿಧಾನಸಭೆಯ ಅಧಿವೇನ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಡಿಸಿಎಂ ಅಶ್ವಥ್ ನಾರಾಯಣ ಅವರು ಕೊರೊನಾ ತಪಾಸಣೆಗೆ ಒಳಪಟ್ಟಿದ್ದರು. ಈ ವೇಳೆಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಕುರಿತು ಟ್ವೀಟ್ ಮಾಡಿರುವ ಅಶ್ಚಥ್ ನಾರಾಯಣ್ ತನಗೆ ಯಾವುದೇ ಕೊರೊನಾ ಲಕ್ಷಣಗಳು ಇಲ್ಲ. ನಾನು ಆರೋಗ್ಯವಾಗಿದ್ದೇನೆ.

ವರದಿಯಲ್ಲಿ ಪಾಸಿಟಿವ್ ಬಂದಿರುವುದರಿಂದಾಗಿ ನಾನು ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ ಎಂದಿದ್ದಾರೆ. ಅಲ್ಲದೇ ತನ್ನೊಂದಿಗೆ ನೇರ ಸಂಪರ್ಕಕ್ಕೆ ಬಂದಿದ್ದವರು ಮುನ್ನೆಚ್ಚರಿಕಾ ಕ್ರಮವಾಗಿ ತಪಾಸಣೆಯನ್ನು ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.