ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ಅಧ್ಯಕ್ಷ ಮಹಾಬಲೇಶ್ವರ ಹೆಗಡೆ ವಿಧಿವಶ

ಬೆಂಗಳೂರು : ಕೊರೊನಾ ವೈರಸ್ ಸೋಂಕಿನಿಂದಾಗಿ ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ಅಧ್ಯಕ್ಷ ಮಹಾಬಲೇಶ್ವರ ಹೆಗಡೆ (73 ವರ್ಷ) ಅವರು ವಿಧಿವಶರಾಗಿದ್ದಾರೆ.

ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡಿದ್ದು ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಯಲ್ಲಿ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯ ದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಹುಬ್ಬಳ್ಳಿಯ ಕಾಡಸಿದ್ದೇಶ್ವರ ಆರ್ಟ್ಸ್ ಕಾಲೇಜು ಮತ್ತು ಜಬಿನ್ ಕಾಲೇಜುಗಳಲ್ಲಿಯೂ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದಾರೆ. ರಾಜಾ ಕುಂದಾಮ, ಸೀತಾ ವಿಯೋಗ, ತ್ರಿಶಂಕು ಚರಿತೆ ಸೇರಿದಂತೆ ಸುಮಾರು 15ಕ್ಕೂ ಅಧಿಕ ಪ್ರಸಂಗಗಳನ್ನು ರಚಿಸಿದ್ದಾರೆ.

ಎಂ.ಎ.ಹೆಗಡೆ ಎಂಬ ಹೆಸರಿನಿಂದಲೇ ಖ್ಯಾತಿಯನ್ನು ಪಡೆದಿದ್ದು, ಸಂಸ್ಕೃತ ವಿದ್ವಾಂಸರಾಗಿಯೂ ಸೇವೆ ಯನ್ನು ಸಲ್ಲಿಸಿದ್ದಾರೆ. ಅಲ್ಲದೇ ಯಕ್ಷಗಾನ ಕಲಾವಿದ ರಾಗಿಯೂ ಮಹಾಬಲೇಶ್ವರ ಹೆಗಡೆ ಅವರು ಪ್ರಖ್ಯಾತಿ ಯನ್ನು ಪಡೆದುಕೊಂಡಿದ್ದಾರೆ.

Comments are closed.