ತೆಂಕು ತಿಟ್ಟಿನ ಹಿರಿಯ ಯಕ್ಷಗಾನ ಕಲಾವಿದ ಡಾ.ಶ್ರೀಧರ ಭಂಡಾರಿ ಪುತ್ತೂರು ಇನ್ನಿಲ್ಲ

ಪುತ್ತೂರು : ಧರ್ಮಸ್ಥಳ ಮೇಳದ ಹಿರಿಯ ಕಲಾವಿದ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ಶ್ರೀಧರ ಭಂಡಾರಿ ಪುತ್ತೂರು ಅವರು ಬಾರದ ಲೋಕಕ್ಕೆ ಪಯಣಿಸಿದ್ದಾರೆ.

ಯಕ್ಷಗರಂಗದ ಸಿಡಿಲಮರಿ ಎಂದೇ ಖ್ಯಾತಿಯನ್ನು ಪಡೆದಿರುವ ಶ್ರೀಧರ ಭಂಡಾರಿ ಅವರಿಗೆ 73 ವರ್ಷ ವಯಸ್ಸಾಗಿತ್ತು. ಧರ್ಮಸ್ಥಳ ಮೇಳದಲ್ಲಿ ಸೇವೆ ಸಲ್ಲಿಸುತ್ತಿದ್ದಾಗಲೇ ಅವರು ನಿಧನರಾಗಿದ್ದಾರೆ. ಶ್ರೀಧರ ಭಂಡಾರಿ ಅವರ ಯಕ್ಷಗಾನ ಸಾಧನೆಗೆ ಅಮೇರಿಕಾರ ಯೂನಿವರ್ಸಿಟಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.

ತಂದೆ ಶೀನಪ್ಪ ಭಂಡಾರಿ ಅವರಿಂದ ಯಕ್ಷಗಾನವನ್ನು ಕಲಿತಿ ಶ್ರೀಧರ ಭಂಡಾರಿ ಅವರು ನಂತರದಲ್ಲಿ ಕುರಿಯ ವಿಠ್ಠಲ ಶಾಸ್ತ್ರಿ, ಹೊಸಹಿತ್ಲು ಮಾಲಿಂಗ ಭಟ್ಟರು ಸೇರಿದಂತೆ ಹಲವರಿಂದ ಯಕ್ಷಗಾನ ಕಲೆಯನ್ನು ಕರಗತ ಮಾಡಿಕೊಂಡರು. ನಂತರದಲ್ಲಿ ನಾರಾಯಣ ಭಟ್ಟರು, ಗೋವಿಂದ ಭಟ್ಟರ ಗರಡಿಯಲ್ಲಿ ಪಳಗಿದ ಶ್ರೀಧರ ಭಂಡಾರಿ ಅವರು ಸುಬ್ರಹ್ಮಣ್ಯ ಮೇಳ, ಬಳ್ಳಂಬೆಟ್ಟು ಮೇಳಗಳಲ್ಲಿಯೂ ಸೇವೆ ಸಲ್ಲಿಸಿದ್ದ ಶ್ರೀಧರ ಭಂಡರು ಹಲವು ದಶಗಳ ಕಾಲ ಧರ್ಮಸ್ಥಳ ಮೇಳದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಅಭಿಮನ್ಯು, ಬಬ್ರುವಾಹನ, ಕೃಷ್ಣ, ಭಾರ್ಗವ ಸೇರಿದಂತೆ ಹಲವು ಪಾತ್ರಗಳ ಮೂಲಕ ಪ್ರಖ್ಯಾತಿಯನ್ನು ಪಡೆದುಕೊಂಡಿದ್ದರು. ದೇಶದಲ್ಲಿ ಮಾತ್ರವಲ್ಲದೇ ಲಂಡನ್, ಜಪಾನ್, ಟೊಕಿಯೋ, ಅಮೇರಿಕಾ, ದುಬೈ, ಬೆಹರಿನ್ ಸೇರಿದಂತೆ ಹಲವು ನಗರಗಳಲ್ಲಿಯೂ ಯಕ್ಷಗಾನ ಕಲೆಯನ್ನು ಪಸರಿಸುವ ಕಾರ್ಯವನ್ನು ಮಾಡಿದ್ದಾರೆ. ಪತ್ನಿ ಉಷಾ ಭಂಡಾರಿ, ಪುತ್ರಿಯರಾದ ಕೋಕಿಲ, ಶಾಂತಲಾ, ಅನಿಲ ಹಾಗೂ ಪುತ್ರ ದೇವಿ ಪ್ರಕಾಶ್ ಅವರನ್ನು ಅಗಲಿದ್ದಾರೆ.

Comments are closed.